ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತುವರಿ ತೆರವು: ₹100 ಕೋಟಿ ಮೌಲ್ಯದ ಜಾಗ ಸರ್ಕಾರದ ವಶಕ್ಕೆ

Last Updated 14 ಸೆಪ್ಟೆಂಬರ್ 2020, 6:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜಕಾರಣಿಯೊಬ್ಬರು ಒತ್ತುವರಿ ಮಾಡಿದ್ದ 5 ಎಕರೆ 16 ಗುಂಟೆ ಜಾಗವನ್ನು ಬೆಂಗಳೂರು ನಗರ ಜಿಲ್ಲಾಡಳಿತ ಸೋಮವಾರ ಸರ್ಕಾರದ ವಶಕ್ಕೆ ಪಡೆದಿದೆ.

ಬನ್ನೇರುಘಟ್ಟ ರಸ್ತೆ ಹೊಮ್ಮದೇವನಹಳ್ಳಿ ಬಸವಣ್ಣ ಸರ್ಕಲ್‌ ಸಮೀಪದಲ್ಲಿ ರಾಜಕಾರಣಿ ಪ್ರಭಾಕರ್‌ ರೆಡ್ಡಿ ಅವರು ಒತ್ತುವರಿ ಮಾಡಿಕೊಂಡಿದ್ದರು. ಈ ಹಿಂದೆ ಎರಡು ಸಲ ಒತ್ತುವರಿ ತೆರವಿಗೆ ಜಿಲ್ಲಾಡಳಿತ ಪ್ರಯತ್ನಿಸಿತ್ತು. ಒತ್ತುವರಿದಾರರ ಪ್ರತಿರೋಧದಿಂದಾಗಿ ಕಾರ್ಯಾಚರಣೆ ಯಶಸ್ವಿಯಾಗಿರಲಿಲ್ಲ. ಸರ್ಕಾರ ಗೋಮಾಳ ಜಾಗದಲ್ಲಿ ಬೇಲಿ ಹಾಕಿಕೊಂಡು ಶೆಡ್‌ಗಳನ್ನು ನಿರ್ಮಿಸಲಾಗಿತ್ತು.

ಜಿಲ್ಲಾಧಿಕಾರಿ ಜಿ.ಎನ್‌.ಶಿವಮೂರ್ತಿ, ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಶಿವಣ್ಣ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಶೆಡ್‌ಗಳನ್ನು ನೆಲಸಮ ಮಾಡಿದರು. ಪೊಲೀಸರು ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಿದ್ದರು. ಈ ಜಾಗದ ಒಟ್ಟು ಮೌಲ್ಯ ₹100 ಕೋಟಿ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಅಂದಾಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT