ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಮಾಜ ವಿಜ್ಞಾನ ವಿಷಯಗಳ ಅಧ್ಯಯನಕ್ಕೆ ಉತ್ತೇಜಿಸಿ: ಲಿಂಗರಾಜ ಗಾಂಧಿ

ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಲಿಂಗರಾಜ ಗಾಂಧಿ
Published 20 ಮೇ 2024, 15:52 IST
Last Updated 20 ಮೇ 2024, 15:52 IST
ಅಕ್ಷರ ಗಾತ್ರ

ಬೆಂಗಳೂರು: ‘ಕಲಾ, ಮಾನವಿಕ ಶಾಸ್ತ್ರ ಮತ್ತು ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದ ವಿಷಯಗಳಿಗೆ ಬೇಡಿಕೆ ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಆಗುತ್ತಿದ್ದು, ಈ ಕುರಿತು ಚಿಂತನೆ ನಡೆಸುವ ಅಗತ್ಯವಿದೆ‘ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಲಿಂಗರಾಜ ಗಾಂಧಿ ಹೇಳಿದರು.

ಬೆಂಗಳೂರು ನಗರ ವಿಶ್ವವಿದ್ಯಾಲಯ ಸೋಮವಾರ ಆಯೋಜಿಸಿದ್ದ ‘ಇತಿಹಾಸ ಅಧ್ಯಾಪಕರಿಗೆ ಇಂಟರ್ನ್‌ಶಿಪ್‌’ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವಿಕ ಮತ್ತು ಸಮಾಜ ವಿಜ್ಞಾನ ವಿಷಯಗಳನ್ನು ಅಧ್ಯಯನ ಮಾಡುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕಿದೆ. ವಿದ್ಯಾರ್ಥಿಗಳಲ್ಲಿ ಉದ್ಯೋಗ ಅರ್ಹತೆ ಪಡೆಯಲು ಶಿಕ್ಷಣದ ಜೊತೆಗೆ ವೃತ್ತಿಗೆ ಸಂಬಂಧಿಸಿದ ಕೌಶಲಗಳ ತರಬೇತಿ ನೀಡುವ ಕೆಲಸ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಪದವಿಯ 6ನೇ ಸೆಮಿಸ್ಟರ್‌ನಲ್ಲಿ ಇಂಟರ್ನ್‌ಶಿಪ್‌ ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ಬೋಧಕರಾಗಲಿ ಅಥವಾ ವಿದ್ಯಾರ್ಥಿಗಳಾಗಲಿ ಆತಂಕ ಪಡಬೇಕಿಲ್ಲ. ಬೆಂಗಳೂರು ನಗರ ವಿಶ್ವವಿದ್ಯಾಲಯ ಈಗಾಗಲೇ ಈ ಕುರಿತು ಮಾರ್ಗಸೂಚಿಗಳು ಸೇರಿದಂತೆ ಮೌಲ್ಯಮಾಪನ ವಿಧಾನಗಳನ್ನು ತಿಳಿಸುವ ಸುತ್ತೋಲೆ ಹೊರಡಿಸಿದೆ’ ಎಂದು ತಿಳಿಸಿದರು. 

‘ವಿದ್ಯಾರ್ಥಿಗಳು ಸ್ವಯಂ ಉದ್ಯೋಗ, ಉದ್ಯಮಶೀಲತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸಬೇಕು’ ಎಂದರು.

ಇತಿಹಾಸ ಅಧ್ಯಯನ ಮಂಡಳಿ ಅಧ್ಯಕ್ಷ ಎಸ್. ನಾಗರತ್ನಮ್ಮ, ಪ್ರಾಧ್ಯಾಪಕರಾದ ಎಚ್.ಜಿ. ನಾರಾಯಣ, ಅನುರಾಧ. ವಿ., ಆನಂದ ಎಸ್., ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಪಿ.ಟಿ. ಶ್ರೀನಿವಾಸ ನಾಯಕ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT