ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾರ್ಯಾಚರಣೆ ನಡೆಸಿ, ಆಸ್ಟಿನ್ ಟೌನ್, ಬಜಾಜ್ ಸ್ಟ್ರೀಟ್ ಮತ್ತು ನೀಲಸಂದ್ರದಲ್ಲಿ ಒತ್ತುವರಿಯಾಗಿದ್ದ ₹3 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದೆ.

ಆಸ್ಟಿನ್ ಟೌನ್, ಬಜಾಜ್ ಸ್ಟ್ರೀಟ್, ನೀಲಸಂದ್ರ ಮಳಿಗೆ ಸಂಖ್ಯೆ 31/1 ಮತ್ತು 42ರಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.

ಪ್ರಾಧಿಕಾರಕ್ಕೆ ಸೇರಿದ ಜಾಗವನ್ನು ಅತಿಕ್ರಮಿಸಿಕೊಂಡು, ಶೆಡ್ ಹಾಗೂ ಮಳಿಗೆಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದರು. ಶೆಡ್ ತೆರವುಗೊಳಿಸುವಂತೆ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿತ್ತು. ಬಳಿಕ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು ಎಂದು ಬಿಡಿಎ ಎಂಜಿನಿಯರ್ ತಿಳಿಸಿದರು.

ಕಾರ್ಯಾಚರಣೆಯನ್ನು ಬಿಡಿಎ ಕಾರ್ಯನಿರತ ಪಡೆಯ ಡಿವೈಎಸ್ಪಿ, ಪೂರ್ವ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.