ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಭೂಮಿ ಒತ್ತುವರಿ: ಒಂದು ವರ್ಷ ಶಿಕ್ಷೆ

Last Updated 9 ಮಾರ್ಚ್ 2023, 20:08 IST
ಅಕ್ಷರ ಗಾತ್ರ

ಬೆಂಗಳೂರು: ಕೋಲಾರದ ಮಾಲೂರಿನ ಕಸಬಾ ಹೋಬಳಿ ಆನೆಪುರದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದ ನಾಲ್ವರಿಗೆ ಒಂದು ವರ್ಷ ಕಾರಾಗೃಹ ವಾಸ ಹಾಗೂ ತಲಾ ₹5 ಸಾವಿರ ದಂಡ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಆನೆಪುರದ ಸರ್ವೆ ನಂ.79ರಲ್ಲಿ ಮಾರ್ಕೋಂಡಪ್ಪ, ಶ್ರೀರಾಮಪ್ಪ, ಚಿಕ್ಕಕೊಂಡಪ್ಪ, ನಾಗಪ್ಪ ಅವರು ಸರ್ಕಾರಿ ಜಮೀನು ಅತಿಕ್ರಮ ಮಾಡಿದ್ದಾರೆ ಎಂಬ ವಿಷಯವನ್ನು ಪರಾಮರ್ಶಿಸಿದ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯ ಪಾಟೀಲ ನಾಗಲಿಂಗನಗೌಡ, ಕಂದಾಯ ಸದಸ್ಯರಾದ ಕೆ.ಎಚ್‌. ಅಶ್ವತ್ಥನಾರಾಯಣಗೌಡ ಅವರು ಶಿಕ್ಷೆ ವಿಧಿಸಿದ್ದಾರೆ.

ಅಪರಾಧಿಗಳು ಒತ್ತುವರಿ ಮಾಡಿದ್ದ ಸರ್ಕಾರಿ ಜಮೀನಿನನ್ನು ಖುಲ್ಲಾಪಡಿಸಿ, ಸರ್ಕಾರದ ವಶಕ್ಕೆ ಪಡೆಯಲು ಮಾಲೂರು ತಾಲ್ಲೂಕು ತಹಶೀಲ್ದಾರ್ ಅವರಿಗೆ ನ್ಯಾಯಾಧೀಶ ಆದೇಶ ನೀಡಿದೆ ಎಂದು ಸರ್ಕಾರಿ ಅಭಿಯೋಜಕಿ ಎ. ಚಂದ್ರಕಲಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT