ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ‘ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ’ ಪ್ರಶಸ್ತಿಗಾಗಿ ಸಂಶೋಧಕ, ಕಾಸರಗೋಡಿನ ಪಿ. ಶ್ರೀಕೃಷ್ಣಭಟ್ ಅವರನ್ನು ಆಯ್ಕೆ ಮಾಡಲಾಗಿದೆ.

ಹಳಗನ್ನಡ ಸಾಹಿತ್ಯ, ಛಂದಸ್ಸು, ನಿಘಂಟು ರಚನೆ, ಗ್ರಂಥ ಸಂಪಾದನೆ, ಅನುವಾದ, ಭಾಷಾಶಾಸ್ತ್ರ ಮೊದಲಾದ ಶಾಸ್ತ್ರ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ಶ್ರೀಕೃಷ್ಣಭಟ್ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿ ಮತ್ತು ಚಿನ್ನದ ಪದಕದೊಂದಿಗೆ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ‘ಕನ್ನಡ ವ್ಯಾಕರಣ ಪರಂಪರೆಯ ಮೇಲೆ ಸಂಸ್ಕೃತದ ಪ್ರಭಾವ’ಎನ್ನುವ ವಿಷಯದಲ್ಲಿ ಸಂಶೋಧನೆ ನಡೆಸಿ ಡಾಕ್ಟರೇಟ್ ಪಡೆದಿದ್ದರು.

ಸುರತ್ಕಲ್‌ನಲ್ಲಿ ವೃತ್ತಿ ಜೀವನ ಆರಂಭಿಸಿದ್ದ ಭಟ್ ಮುಂದೆ ಕಾಸರಗೋಡಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಕನ್ನಡ ಪ್ರಾಧ್ಯಾಪಕ ಮತ್ತು ವಿಭಾಗದ ಮುಖ್ಯಸ್ಥರಾಗಿದ್ದರು. ಕಣ್ಣೂರು ವಿಶ್ವವಿದ್ಯಾಲಯದ ಭಾರತೀಯ ಭಾಷಾ ಅಧ್ಯಯನಾಂಗದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಕಾಸರಗೋಡು ಸರ್ಕಾರಿ ಕಾಲೇಜು, ಕಲ್ಲಿಕೋಟೆ, ಕಣ್ಣೂರು ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಸಂಶೋಧನೆ ಮತ್ತು ಅಧ್ಯಯನ ನಡೆಯುವಲ್ಲಿ ಮುಖ್ಯಪಾತ್ರ ವಹಿಸಿದ್ದರು. ಅವರ ಕೊಡುಗೆಯನ್ನು ಗಮನಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.