ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಹೆಚ್ಚಳ?

Last Updated 29 ಆಗಸ್ಟ್ 2021, 22:00 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳ ಶುಲ್ಕ ಶೇ 5ರಿಂದ 10ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ.

‘ಶುಲ್ಕ ಹೆಚ್ಚಿಸುವಂತೆ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಆಡಳಿತ ಮಂಡಳಿಗಳು ಬೇಡಿಕೆ ಇಟ್ಟಿವೆ. ಈ ಬೇಡಿಕೆಯನ್ನು ಪರಿಗಣಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ’ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

‘ಮೂರು ವರ್ಷಗಳಿಂದ ಶುಲ್ಕ ಹೆಚ್ಚಳ ಮಾಡಿಲ್ಲ. ಸಿಬ್ಬಂದಿ ವೇತನ ಮತ್ತು ಕಾಲೇಜು ನಿರ್ವಹಣಾ ವೆಚ್ಚ ಹೆಚ್ಚಳ ಆಗಿರುವುದರಿಂದ ಕೋರ್ಸ್‌ ಶುಲ್ಕವನ್ನು ಶೇ 30ರಷ್ಟು ಹೆಚ್ಚಿಸುವಂತೆ ಆಡಳಿತ ಮಂಡಳಿಗಳು ಬೇಡಿಕೆ ಇಟ್ಟಿವೆ. ಆದರೆ, ಶೇ 10ರಷ್ಟು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಶುಲ್ಕ ಹೆಚ್ಚಿಸುವಂತೆ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಬೇಡಿಕೆ ಇಟ್ಟಿದ್ದರೂ ಪರಿಗಣಿಸಿಲ್ಲ’ ಎಂದು ಮೂಲಗಳು ಹೇಳಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ‘ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳ ಜೊತೆ ಸೆಪ್ಟೆಂಬರ್‌ ಎರಡನೇ ವಾರದಲ್ಲಿ ಸಭೆ ನಡೆಸಲಿದ್ದೇನೆ. ಶುಲ್ಕ ಹೆಚ್ಚಿಸುವ ಬಗ್ಗ ಈವರೆಗೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಎಂದರು.

ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿರುವ ಒಟ್ಟು ಸೀಟುಗಳಲ್ಲಿ ಶೇ 45ರಷ್ಟು ಸಿಇಟಿ, ಶೇ 30ರಷ್ಟು ಕಾಮೆಡ್‌–ಕೆ ಮತ್ತು ಶೇ 25ರಷ್ಟು ಎನ್‌ಆರ್‌ಐ ಮತ್ತು ಆಡಳಿತ ಮಂಡಳಿಗಳಿಗೆ ಹಂಚಿಕೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT