ಕೆ.ಆರ್.ಪುರ: ಇಲ್ಲಿನ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಂಜಿನಿಯರಿಂಗ್ ಪದವಿ ಪೂರೈಸಿದ ವಿವಿಧ ವಿಭಾಗಗಳ 742 ವಿದ್ಯಾರ್ಥಿಗಳು ಮತ್ತು ಪಿಎಚ್.ಡಿ ಪಡೆದ ನಾಲ್ವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ನಿರ್ದೇಶಕ ಪಿ.ಬಲರಾಮ್, ‘ತಂತ್ರಜ್ಞಾನದಲ್ಲಿ ಮಹತ್ತರ ಬದಲಾವಣೆಗಳಾಗಿದ್ದು ಅದಕ್ಕೆ ತಕ್ಕಂತೆ ಅಭಿವೃದ್ಧಿಗೆ ಮನ್ನಣೆಯೂ ದೊರೆಯುತ್ತಿದೆ’ ಎಂದು ಅಭಿಪ್ರಾಯಪಟ್ಟರು.

ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷ ಡಿ.ಕೆ.ಮೋಹನ್ ಬಾಬು ಮಾತನಾಡಿ, ‘ಮಹಾವಿದ್ಯಾಲಯವು ಉತ್ತಮ ರೀತಿಯ ಬೋಧನಾ ಕ್ರಮಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಯಶಸ್ಸಿಗೆ ಕಾರಣವಾಗಿದೆ’ ಎಂದರು.

ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಪ್ರಧಾನ ಸಂಶೋಧಕ ಸ್ವಾಮಿ ಮನೋಹರ್, ಎ.ಆರ್.ಎಂ. ಎಂಬೆಡೆಡ್ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್ನ ಪ್ರಾದೇಶಿಕ ಮುಖ್ಯಸ್ಥ ಸುಮೀತ್ ವರ್ಮಾ, ಕಾಲೇಜು ಸಿಇಒ ನಿತಿನ್ ಮೋಹನ್, ಸಲಹೆಗಾರ ಕೆ.ಎನ್.ಬಾಲಸುಬ್ರಹ್ಮಣ್ಯ ಮೂರ್ತಿ, ಪ್ರಾಂಶುಪಾಲೆ ಜಿ.ಇಂದುಮತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.