ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಜಿನಿಯರಿಂಗ್ ಸೀಟಿನ ಆಮಿಷ, ವಂಚನೆ: ಬಂಧನ

Last Updated 30 ಜನವರಿ 2022, 19:40 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಎಂಜಿನಿಯರಿಂಗ್ ಕಾಲೇ ಜೊಂದರಲ್ಲಿ ಸೀಟು ಕೊಡಿಸುವ ಆಮಿಷವೊಡ್ಡಿ ₹ 1.27 ಲಕ್ಷ ಪಡೆದು ವಂಚಿಸಿದ್ದ ಆರೋಪ ದಡಿ ರಾಜೇಶ್ವರ್ ಎಂಬಾತನನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

‘ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರ ಪೋಷ ಕರು ದೂರು ನೀಡಿದ್ದರು. ಅದರನ್ವಯ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸ ಲಾಗಿದೆ. 3 ಮೊಬೈಲ್, 4 ಲ್ಯಾಪ್‌ಟಾಪ್, 7 ಸಿಮ್‌ ಕಾರ್ಡ್ ಹಾಗೂ 27 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕಾಲೇಜಿನಲ್ಲಿ ಕೆಲ ಸೀಟು ಗಳು ಖಾಲಿ ಇವೆ. ಹಣ ನೀಡಿದರೆ ಸೀಟು ಸಿಗುತ್ತದೆ’ ಎಂಬುದಾಗಿ ಆರೋಪಿ ಹೇಳಿದ್ದ. ಆತನ ಮಾತು ನಂಬಿದ್ದ ಪೋಷಕರು, ಜ. 13ರಂದು ₹ 1.27 ಲಕ್ಷ ನೀಡಿದ್ದರು. ಹಣ ಪಡೆದ ನಂತರ ನಾಪತ್ತೆಯಾಗಿದ್ದ ಆರೋಪಿ, ಮೊಬೈಲ್ ಸಹ ಸ್ವಿಚ್ ಆಫ್ ಮಾಡಿದ್ದ. ನೊಂದ ಪೋಷಕರು, ಠಾಣೆಗೆ ದೂರು ನೀಡಿದ್ದರು‘ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT