4

211 ಎಇಇಗಳಿಗೆ ಇಇ ಹುದ್ದೆಗೆ ಬಡ್ತಿ

Published:
Updated:

ಬೆಂಗಳೂರು: 211 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ (ಎಇಇ), ಕಾರ್ಯನಿರ್ವಾಹಕ ಎಂಜಿನಿಯರ್‌ (ಇಇ) ಹುದ್ದೆಗಳಿಗೆ ಬಡ್ತಿ ನೀಡಿ ಲೋಕೋಪಯೋಗಿ ಇಲಾಖೆ ಗುರುವಾರ ಆದೇಶ ಹೊರಡಿಸಿದೆ. ಈ ಪೈಕಿ, 100ಕ್ಕೂ ಹೆಚ್ಚು ಇಇಗಳನ್ನು ಜಲ ಸಂಪನ್ಮೂಲ ಇಲಾಖೆಗೆ ನೇಮಿಸಲಾಗಿದೆ.

ಅದೇ ರೀತಿ, 55 ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ (ಇಇ) ಸೂಪರಿಂಟೆಂಡೆಂಟ್‌ ಎಂಜಿನಿಯರ್ (ಎಸ್‌ಇ) ಹುದ್ದೆಗೆ ಬಡ್ತಿ ನೀಡಲಾಗಿದೆ. ಈ ಪೈಕಿ, 30 ಎಸ್‌ಇಗಳನ್ನು ಜಲ ಸಂಪನ್ಮೂಲ ಇಲಾಖೆಗೆ ನಿಯೋಜಿಸಲಾಗಿದೆ.

ಜೂನ್‌ 8ರಂದು 25 ಮುಖ್ಯ ಎಂಜಿನಿಯರ್‌ಗಳನ್ನು ಜಲ ಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಿದ್ದಕ್ಕೆ ಇಲಾಖೆಯ ಸಚಿವ ಡಿ.ಕೆ. ಶಿವಕುಮಾರ್‌, ಲೋಕೋಪಯೋಗಿ ಸಚಿವ ರೇವಣ್ಣ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಪೈಕಿ, 3 ಎಂಜಿನಿಯರ್‌ಗಳು ಮಾತ್ರ ಕರ್ತವ್ಯಕ್ಕೆ ಸೇರಿದ್ದು, ಉಳಿದವರು ಅತಂತ್ರ ಸ್ಥಿತಿಯಲ್ಲಿದ್ದಾರೆ.

ಎಂಜಿನಿಯರ್‌ಗಳಿಗೆ ಬಡ್ತಿ ನೀಡುವ ವಿಷಯದಲ್ಲಿ ಲೋಕೋಪಯೋಗಿ ಇಲಾಖೆಯ ಅಧೀನ ಕಾರ್ಯದರ್ಶಿ ವೆಂಕಟೇಶಯ್ಯ (ಸೇವೆಗಳು– ಎ ಶಾಖೆ) ಮತ್ತು ಉಪ ಕಾರ್ಯದರ್ಶಿ ತಿಪ್ಪೇಸ್ವಾಮಿ (ಸೇವೆಗಳು) ಮಧ್ಯೆ ವಾಗ್ವಾದ ಉಂಟಾಗಿದ್ದು, ತಿಪ್ಪೇಸ್ವಾಮಿ ಅವರನ್ನು ಹಾಲಿ ಹುದ್ದೆಯಿಂದ ಬಿಡುಗಡೆ ಮಾಡಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಆದೇಶ ಹೊರಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !