ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 835 ಶಾಲೆಗಳಲ್ಲಿ ಆಂಗ್ಲಮಾಧ್ಯಮ

ಈ ವರ್ಷ ಆರಂಭಕ್ಕೆ ಪ್ರಸ್ತಾವ: ಸುರೇಶ್ ಕುಮಾರ್‌
Last Updated 19 ಮಾರ್ಚ್ 2020, 20:05 IST
ಅಕ್ಷರ ಗಾತ್ರ

ಬೆಂಗಳೂರು: ‘2020–21ನೇ ಶೈಕ್ಷಣಿಕ ವರ್ಷದಿಂದ ಹೆಚ್ಚುವರಿಯಾಗಿ 835 ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗ ಆರಂಭಿಸಲು ಉದ್ದೇಶಿಸಲಾಗಿದೆ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಡಿ.ವೇದವ್ಯಾಸ ಕಾಮತ್‌ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ.

‘ಪ್ರತಿ ವಿಧಾನಸಭಾ ಕ್ಷೇತ್ರದ ನಾಲ್ಕು ಶಾಲೆಗಳಲ್ಲಿ ವಿಭಾಗಗಳನ್ನು ತೆರೆಯಲಾಗುತ್ತದೆ. ದಾಖಲಾತಿ ಹೆಚ್ಚಿರುವ ಶಾಲೆಗಳಿಗೆ, ಒಂದೇ ಆವರಣದಲ್ಲಿ 1ರಿಂದ ಎಸ್ಸೆಸ್ಸೆಲ್ಸಿವರೆಗೆ ಇರುವ ಶಾಲೆಗಳಿಗೆ ಹಾಗೂ ಸಾಕಷ್ಟು ತರಗತಿ ಕೊಠಡಿಗಳು ಲಭ್ಯವಿರುವ ಶಾಲೆಗಳಿಗೆ ಆದ್ಯತೆ ನೀಡಲಾಗುತ್ತದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT