ಸೋಮವಾರ, ಜೂನ್ 21, 2021
21 °C

ನೀರಿನ ಶುದ್ಧತೆ ಖಚಿತಪಡಿಸಿಕೊಳ್ಳಿ: ಆರೋಗ್ಯ ಇಲಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕುಡಿಯುವ ನೀರು ಕಲುಷಿತವಾದಲ್ಲಿ ಅನೇಕ ರೋಗಗಳು ಹರಡುವ ಸಂಭವಿರುತ್ತದೆ. ಹಾಗಾಗಿ ನೀರಿನ ಶುದ್ಧತೆಯ ಬಗ್ಗೆ  ಖಚಿತ ಪಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. 

ಕಲುಷಿತ ನೀರು ಕುಡಿದಲ್ಲಿ ಅತಿಸಾರ, ಕಾಮಾಲೆ, ಕಾಲರಾ, ಪೋಲಿಯೊ, ಚರ್ಮರೋಗ, ಆಮಶಂಕೆ ಸೇರಿದಂತೆ ವಿವಿಧ ರೋಗಗಳು ಬರುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಕುಡಿಯುವ ನೀರು ಕಲುಷಿತವಾಗದಂತೆ ನೋಡಿಕೊಳ್ಳಬೇಕು. ಅದೇ ರೀತಿ, ಕುಡಿಯುವ ನೀರಿನಲ್ಲಿ ಕೈಗಳನ್ನು ಅದ್ದಬಾರದು. ಅವಶ್ಯಕತೆಗೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳಿಂದ ನೀರಿನ ವ್ಯವಸ್ಥೆ ಮಾಡಿಕೊಳ್ಳಬೇಕು. ಪರವಾನಗಿ ಪಡೆದ ಸಂಸ್ಥೆಗಳಿಂದ ಕುಡಿಯುವ ನೀರಿನ ಬಾಟಲ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಮನೆಯ ಸುತ್ತಮುತ್ತಲಿನ ಸ್ಥಳದಲ್ಲಿ ನೀರು ನಿಲ್ಲದಂತೆ ಸಹ ನೋಡಿಕೊಳ್ಳಬೇಕು ಎಂದು ಇಲಾಖೆ ತಿಳಿಸಿದೆ. 

ಪರವಾನಗಿ ಇಲ್ಲದ ವ್ಯಕ್ತಿಗಳು ನೀರು ಸರಬರಾಜು ಮಾಡದಂತೆ ನೋಡಿಕೊಳ್ಳಬೇಕು. ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಉತ್ತಮ. ಆಹಾರಕ್ಕೆ ಕೂಡ ಕುದಿಸಿದ ನೀರನ್ನೇ ಬಳಕೆ ಮಾಡಬೇಕು. ಕುಡಿಯಲು ಬಳಸದ ನೀರಿಗೆ ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ರಾಸಾಯನಿಕಗಳನ್ನು ಬಳಸಬೇಕು ಎಂದು ಸೂಚಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು