ಬೆಂಗಳೂರು: ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಬೆಂಗಳೂರಿನ ಇಂಡಿಯನ್ ಅಕಾಡೆಮಿ ಆಫ್ ಎಂಜಿನಿಯರಿಂಗ್ (ಐಎನ್ಎಇ) ಚಾಪ್ಟರ್ ಹಾಗೂ ಗೋಕುಲ ಎಜುಕೇಷನ್ ಫೌಂಡೇಷನ್ ವತಿಯಿಂದ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ‘ಪರಿಸರ ಮತ್ತು ಹಸಿರು ಶಕ್ತಿ– ಪರ್ಯಾವರಣ– 2025’ ಕಾರ್ಯಾಗಾರ ಆಯೋಜಿಸಲಾಗಿತ್ತು.

‘ಸಣ್ಣಮಟ್ಟದ ವೈಯಕ್ತಿಕ ಪ್ರಯತ್ನಗಳು ಸಹ ಸುಸ್ಥಿರ ಅಭಿವೃದ್ಧಿಗೆ ಗಮನಾರ್ಹವಾಗಿ ಕೊಡುಗೆ ನೀಡಬಹುದು’ ಎಂದು ಹೇಳಿದ ಗೋಕುಲ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಎಂ.ಆರ್. ಸೀತಾರಾಂ, ಪರಿಸರ ಸಂರಕ್ಷಣೆಗಾಗಿ ರಾಮಯ್ಯ ಸಮೂಹ ಸಂಸ್ಥೆಗಳು ಕೈಗೊಂಡ ವಿವಿಧ ಉಪಕ್ರಮಗಳನ್ನು ವಿವರಿಸಿದರು.

ರಕ್ಷಣಾ ಸಚಿವರ ಮಾಜಿ ವೈಜ್ಞಾನಿಕ ಸಲಹೆಗಾರ ಡಾ.ವಿ.ಕೆ.ಆತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೋಕುಲ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಎಂ.ಆರ್. ಸೀತಾರಾಂ ಅಧ್ಯಕ್ಷತೆ ವಹಿಸಿದ್ದರು. ಐಎನ್ಎಇ, ಬೆಂಗಳೂರು ಚಾಪ್ಟರ್ ಅಧ್ಯಕ್ಷ ಪ್ರೊ. ಗೋಪಾಲಕೃಷ್ಣನ್ ಮತ್ತು ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ. ಎನ್.ವಿ.ಆರ್. ನಾಯ್ಡು ಭಾಗವಹಿಸಿದ್ದರು.

ಐಐಎಸ್ಸಿ ಪ್ರಾಧ್ಯಾಪಕರಾದ ಪ್ರೊ.ಪಿ. ಎನ್. ವಿನಯ್ ಚಂದ್ರನ್, ಪ್ರೊ.ಶ್ರೀಶಾ ರಾವ್ ಅವರು ಮಾತನಾಡಿದರು.

ಬೆಂಗಳೂರಿನ ಏಳು ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಂದ 28 ಮೌಖಿಕ ಮತ್ತು ಪೋಸ್ಟರ್ ಪ್ರಸ್ತುತಿಗಳು ನಡೆದವು. ಮೌಖಿಕ ಮತ್ತು ಪೋಸ್ಟರ್ ಪ್ರಸ್ತುತಿ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಒಟ್ಟು ನಾಲ್ಕು ನಗದು ಬಹುಮಾನಗಳನ್ನು ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.