ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸೆಂಟ್ರಲ್ ಕಾಲೇಜು ಕ್ಯಾಂಪಸ್‍ನಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಧ್ವಜಾರೋಹಣ ಮಾಡಿದರು.
ನಂತರ ಮಾತನಾಡಿದ ಅವರು, ‘ಸಂವಿಧಾನದ ಆಶಯಗಳು ಮತ್ತು ಕನಸುಗಳ ಸಾಕಾರಕ್ಕಾಗಿ ಭಾರತೀಯರು ಒಗಟ್ಟಾಗಿ ಶ್ರಮಿಸಬೇಕಾಗಿದೆ. ದೇಶ ಮತ್ತು ಸಮಾಜದ ಪ್ರಗತಿಗೆ ಶಿಕ್ಷಣದ ಅಭಿವೃದ್ಧಿ ಬುನಾದಿಯಾಗಿದೆ. ಸರ್ವರಿಗೂ ಸಮಾನ ಗುಣಮಟ್ಟದ ಶಿಕ್ಷಣವನ್ನು ಕಡಿಮೆ ವೆಚ್ಚದಲ್ಲಿ ಒದಗಿಸುವ ಮಹತ್ವದ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ’ ಎಂದು ಅವರು ಅಭಿಪ್ರಾಯಪಟ್ಟರು.
‘ಕಳೆದ ಐದು ವರ್ಷಗಳ ಅವಧಿಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ಒದಗಿಸುತ್ತಿದೆ. ದೇಶದ ಸಂವಿಧಾನದ ಪೀಠಿಕೆ ಮತ್ತು ಆಶಯಗಳಂತೆ ಮತ್ತು ಇಂದಿನ ವೈಜ್ಞಾನಿಕ ಜಗತ್ತಿಗೆ ಅಗತ್ಯವಿರುವ ಕೌಶಲಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ’ ಎಂದರು.
ಬೆಂಗಳೂರು ವಿವಿಯಲ್ಲಿ ಗಣರಾಜ್ಯೋತ್ಸವ: ಬೆಂಗಳೂರು ವಿಶ್ವವಿದ್ಯಾಲಯದ ಕೇಂದ್ರ ಕಚೇರಿ ಎದುರು ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಎಸ್.ಎಂ. ಜಯಕರ ಅವರು ರಾಷ್ಟಧ್ವಜಾರೋಹಣ ಮಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.