ಈಶ್ವರಪ್ಪ ವಿರುದ್ಧದ ಪ್ರಕರಣ: ವಿಚಾರಣೆಗೆ ಹೈಕೋರ್ಟ್‌ ತಡೆ

7

ಈಶ್ವರಪ್ಪ ವಿರುದ್ಧದ ಪ್ರಕರಣ: ವಿಚಾರಣೆಗೆ ಹೈಕೋರ್ಟ್‌ ತಡೆ

Published:
Updated:

ಬೆಂಗಳೂರು: ವಕೀಲ ಬಿ.ವಿನೋದ್ ಅವರ ತೇಜೋವಧೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ವಿರುದ್ಧ ‘ಸಂಸದರು ಹಾಗೂ ಶಾಸಕರ ವಿಶೇಷ ಕೋರ್ಟ್‌’ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಆರು ವಾರಗಳ ಕಾಲ ತಡೆ ನೀಡಿದೆ.

ಪ್ರಕರಣ ರದ್ದು ಕೋರಿ ಈಶ್ವರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ನಡೆಸಿತು. ದೂರುದಾರ ವಕೀಲ ವಿನೋದ್‌ಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

‘ನಾನು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದೇನೆ ಎಂದು ಈಶ್ವರಪ್ಪ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಇದರಿಂದ ನನ್ನ ತೇಜೋವಧೆ ಆಗಿದೆ’ ಎಂದು ಆರೋಪಿಸಿ ವಿನೋದ್ ಶಿವಮೊಗ್ಗದ 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಿದ್ದರು.

ದೂರು ಅಂಗೀಕರಿಸಿದ್ದ ಕೋರ್ಟ್ 2017ರ ಆಗಸ್ಟ್‌ 5ರಂದು ಈಶ್ವರಪ್ಪ ಅವರಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿತ್ತು. ನಂತರ ಈ ಪ್ರಕರಣ ಬೆಂಗಳೂರಿನಲ್ಲಿರುವ ಸಂಸದರು ಹಾಗೂ ಶಾಸಕರ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !