ಮಂಗಳವಾರ, ಜನವರಿ 18, 2022
20 °C

15 ತಿಂಗಳ ಬಳಿಕ ಕೋವಿಡ್‌ ಮೃತದೇಹಗಳ ಪತ್ತೆ: ವಿಚಾರಣೆಗೆ ಸಮಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್‌ನಿಂದ ಮೃತಪಟ್ಟಿದ್ದ ದುರ್ಗಾ ಸುಮಿತ್ರಾ ಹಾಗೂ ಮುನಿರಾಜು ಅವರ ಮೃತದೇಹಗಳು ಶವಾಗಾರ ಸ್ವಚ್ಛಗೊಳಿಸುವ ವೇಳೆ ಶೈತ್ಯಾಗಾರದಲ್ಲಿ ಪತ್ತೆಯಾಗಿದ್ದು, ಈ ಸಂಬಂಧ ವಿಚಾರಣೆ ನಡೆಸಲು ಅನುಭವಿ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ’ ಎಂದು ರಾಜಾಜಿನಗರದ ಇಎಸ್‌ಐ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

‘ಸಮಿತಿಯು ಪ್ರಕರಣದ ಸಮಗ್ರ ವಿಚಾರಣೆ ನಡೆಸಿ ಇನ್ನೊಂದು ವಾರದಲ್ಲಿ ವರದಿ ಸಲ್ಲಿಸಲಿದೆ. ವರದಿ ಲಭಿಸಿದ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದೆ.

‘ಇದೇ 27ರ ಬೆಳಿಗ್ಗೆ 10.30ಕ್ಕೆ ಹಳೆಯ ಶವಾಗಾರದಲ್ಲಿ ಮೃತದೇಹಗಳು ಪತ್ತೆಯಾಗಿದ್ದವು. ಕೂಡಲೇ ರಾಜಾಜಿನಗರ ಠಾಣೆಗೆ ಮಾಹಿತಿ ರವಾನಿಸಲಾಗಿತ್ತು. 11 ಗಂಟೆ ಸುಮಾರಿಗೆ ಸ್ಥಳಕ್ಕೆ ಬಂದಿದ್ದ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದರು. ಮೃತದೇಹಗಳನ್ನು ಪ್ಲಾಸ್ಟಿಕ್‌ನಿಂದ ಸಂಪೂರ್ಣವಾಗಿ ಮುಚ್ಚಲಾಗಿತ್ತು. ಅವುಗಳ ಮೇಲೆ ಹೆಸರಿರುವ ಟ್ಯಾಗ್‌ಗಳನ್ನೂ ಹಾಕಲಾಗಿತ್ತು. ಅವುಗಳನ್ನು ಪೊಲೀಸರ ನೇತೃತ್ವದಲ್ಲೇ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ರವಾನಿಸಲಾಗಿತ್ತು. ಇದೇ 29ರಂದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರ ಸಮ್ಮುಖದಲ್ಲಿ ಮೃತದೇಹಗಳನ್ನು ಬಿಬಿಎಂಪಿಗೆ ಹಸ್ತಾಂತರಿಸಲಾಯಿತು. ರಾತ್ರಿ 7 ಗಂಟೆ ಸುಮಾರಿಗೆ ಶವ ಸಂಸ್ಕಾರ ನೆರವೇರಿಸಲಾಗಿದೆ’ ಎಂದೂ ವಿವರಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು