ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಕಾಂ: 10 ದಿನ ಆನ್‌ಲೈನ್‌ ಸೇವೆ ಅಲಭ್ಯ

Published 5 ಮಾರ್ಚ್ 2024, 16:13 IST
Last Updated 5 ಮಾರ್ಚ್ 2024, 16:13 IST
ಅಕ್ಷರ ಗಾತ್ರ

ಬೆಂಗಳೂರು: ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯನ್ನು ಉನ್ನತೀಕರಣ ಮಾಡಲಾಗುತ್ತಿದ್ದು, ಈ ಕಾರಣದಿಂದ ಇದೇ 10 ರಿಂದ 19ರ ವರೆಗೆ ಎಲ್ಲ ಎಸ್ಕಾಂಗಳ ಆನ್‌ಲೈನ್ ಸೇವೆಗಳು, ನಗರ ಹಾಗೂ ಪಟ್ಟಣ ಪ್ರದೇಶದ ಗ್ರಾಹಕರಿಗೆ ಲಭ್ಯ ಇರುವುದಿಲ್ಲ.

ಎಸ್ಕಾಂಗಳ ವ್ಯಾಪ್ತಿಯಲ್ಲಿ 10 ದಿನಗಳು ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್‌ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯ ಇರುವುದಿಲ್ಲ. ವಿದ್ಯುತ್ ಪೂರೈಕೆಯಲ್ಲಿ ಬದಲಾವಣೆ ಅಥವಾ ಕಡಿತ ಮಾಡುವುದಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ತಂತ್ರಾಂಶ ಕಾರ್ಯಾರಂಭವಾದ ನಂತರ ಸ್ಥಿರಗೊಳ್ಳಲು ಅಂದಾಜು 15 ದಿನಗಳ ಅಗತ್ಯವಿದೆ. ಸಾಫ್ಟ್‌ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತ ಮಾಡುವುದಿಲ್ಲ. ಮೀಟರ್‌ ರೀಡರ್‌ಗಳು, ಗ್ರಾಹಕರಿಗೆ ಬಿಲ್‌ ನೀಡಲಿದ್ದಾರೆ. ಆದರೆ, ಈ ಬಿಲ್‌ಗಳನ್ನು ಮಾರ್ಚ್ 20 ರ ನಂತರವೇ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಲು ಸಾಧ್ಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಕೋರಿದ್ದಾರೆ. 

ಎಲ್ಲೆಲ್ಲಿ ಆನ್‌ಲೈನ್‌ ಸೇವೆ ಇರುವುದಿಲ್ಲ?:

ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆಜಿಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು, ಗೌರಿಬಿದನೂರು.

ಸೆಸ್ಕ್‌: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ.

ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು.

ಜೆಸ್ಕಾಂ: ಕಲಬುರಗಿ, ಮಾನ್ವಿ, ಸಿಂಧನೂರು, ಬೀದರ್‌, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಶಿರಗುಪ್ಪ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ– ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಶಿರಸಿ, ಬಾಗಲಕೋಟೆ, ರಬಕವಿ–ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೇಬೆನ್ನೂರು ಹಾಗೂ ವಿಜಯಪುರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT