ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೆಕೆಂಡರಿ ಅಗ್ರಿಕಲ್ಚರ್‌’ ನಿರ್ದೇಶನಾಲಯ ಸ್ಥಾಪನೆ

Last Updated 19 ಜನವರಿ 2022, 17:28 IST
ಅಕ್ಷರ ಗಾತ್ರ

ಬೆಂಗಳೂರು: ಕೃಷಿ ಇಲಾಖೆ ನಿರ್ದೇಶಕರ ನೇತೃತ್ವದಲ್ಲಿ 13 ಸದಸ್ಯರನ್ನು ಒಳಗೊಂಡ ‘ಸೆಕೆಂಡರಿ ಅಗ್ರಿಕಲ್ಚರ್‌’ ನಿರ್ದೇಶನಾಲಯ ಸ್ಥಾಪಿಸಲಾಗಿದೆ.

ರಾಜ್ಯದಲ್ಲಿ ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಹೊಸ ನಿರ್ದೇಶನಾಲಯ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಈ ಸಂಬಂಧ ಈಗ ಆದೇಶ ಹೊರಡಿಸಲಾಗಿದೆ.

ರೈತರ ಆದಾಯ ಹೆಚ್ಚಿಸಲು ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪ ಉತ್ಪನ್ನಗಳನ್ನು ಕಚ್ಚಾ ವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್‌ ಹಾಗೂ ಸೂಕ್ತ ಬ್ರ್ಯಾಂಡ್‌ ಮೂಲಕ ಮಾರುಕಟ್ಟೆ ಕಲ್ಪಿಸುವುದು ಸೆಕೆಂಡರಿ ಅಗ್ರಿಕಲ್ಚರ್‌ನ ಮುಖ್ಯ ಉದ್ದೇಶ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಸ್ಥಳೀಯವಾಗಿ ಉತ್ಪಾದಿಸಲಾದ ಕಚ್ಚಾವಸ್ತುವು ಗ್ರಾಮ ಮಟ್ಟದಲ್ಲಿ ಪ್ರಾಥಮಿಕ ಸಂಸ್ಕರಣೆಗೆ ಒಳಗಾಗಿದ್ದರೆ ಮತ್ತು ಅಂತಹ ಕಚ್ಚಾ ವಸ್ತುಗಳಿಂದ ಮೌಲ್ಯವರ್ಧಿತಗೊಳಿಸುವ ಪ್ರಾಥಮಿಕ ಉತ್ಪಾದನೆಯನ್ನು ಉದ್ಯಮಕ್ಕೆ ಸರಬರಾಜು ಮಾಡಿದರೆ ಅದನ್ನು ಸೆಕೆಂಡರಿ ಕೃಷಿಯಾಗಿ ಪರಿಗಣಿಸಬಹುದು.

ಜೇನು ಸಾಕಣೆ, ಜೈವಿಕ ಗೊಬ್ಬರ ಘಟಕಗಳು, ಸಾವಯವ ಬಣ್ಣ ಅಥವಾ ಡೈ ತಯಾರಿಕೆ, ಅಣಬೆ, ರೇಷ್ಮೆ ಹುಳು ಸಾಕಣೆ, ನರ್ಸರಿ ಇತ್ಯಾದಿಗಳಂತಹ ಸಣ್ಣ ಪ್ರಮಾಣದ ಚಟುವಟಿಕೆಗಳು ಸೆಕೆಂಡರಿ ಕೃಷಿಗೆ ಉತ್ತಮ ಉದಾಹರಣೆಯಾಗಿದೆ. ಸ್ಥಳೀಯವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಲಭ್ಯವಾಗುವ ಮೂಲ/ ಕಚ್ಛಾ ವಸ್ತುಗಳನ್ನು ಮಾನವ ಶಕ್ತಿ, ಕೌಶಲ್ಯಗಳನ್ನು ಮೂಲವಾಗಿ ಉಪಯೋಗಿಸಿಕೊಂಡು ಅಳವಡಿಸುವ ಸಮಗ್ರ ಚಟುವಟಿಕೆಗಳು ಸೆಕೆಂಡರಿ ಕೃಷಿಗೆ ಉತ್ತಮ ಉದಾಹರಣೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT