ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಚೆ ಮತದಾನ ಕೇಂದ್ರ ಸ್ಥಾಪನೆ

Published 17 ಏಪ್ರಿಲ್ 2024, 16:27 IST
Last Updated 17 ಏಪ್ರಿಲ್ 2024, 16:27 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಅಗತ್ಯ ಸೇವೆಗಳ ಸಿಬ್ಬಂದಿ (ಎವಿಇಎಸ್‌) ಮತಚಲಾಯಿಸಲು ಅನುಕೂಲ ಆಗುವಂತೆ ನಗರ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂಚೆ ಮತದಾನ ಕೇಂದ್ರ ಸ್ಥಾಪಿಸಲಾಗಿದೆ.

ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1,348 ಅಗತ್ಯ ಸೇವೆಗಳ ಸಿಬ್ಬಂದಿ ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ. ಏ.19ರಿಂದ 21ರವರೆಗೆ ಮೂರು ದಿನ ಬೆಳಿಗ್ಗೆ 9 ರಿಂದ ಸಂಜೆ 5ರ ವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿ ಕಚೇರಿ, ಕೊಠಡಿ ಸಂಖ್ಯೆ 17, ನೆಲ ಮಹಡಿ, ಬಿಬಿಎಂಪಿ ಕೇಂದ್ರ ಕಚೇರಿ, ನರಸಿಂಹ ರಾಜ ವೃತ್ತ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳ ಕಚೇರಿ, ವಲಯ ಆಯುಕ್ತರ(ದಕ್ಷಿಣ) ಕಾರ್ಯಾಲಯ, 2ನೇ ಮಹಡಿ, ಮಹಾನಗರ ಪಾಲಿಕೆ ಕಚೇರಿಗಳ ಸಂಕೀರ್ಣ, 9ನೇ ಕ್ರಾಸ್, 2ನೇ ಬ್ಲಾಕ್, ಜಯನಗರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕೇಂದ್ರ ಸಂಘ ಕಟ್ಟಡ, ಸಭಾಂಗಣ, ನೆಲಮಹಡಿ, ಕಂದಾಯ ಭವನ ಹಿಂಬಾಗ, ಕೆ.ಜಿ ರಸ್ತೆ ಇಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT