ಬೆಂಗಳೂರು: ಇ.ವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ, ತ್ವರಿತ ವಿದ್ಯುತ್ ಸಂಪರ್ಕಕ್ಕೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಹೊಂದಿರುವ ‘ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್’ ಅನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಆರಂಭಿಸಿದೆ.

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಈಚೆಗೆ ಪೋರ್ಟಲ್ಗೆ ಚಾಲನೆ ನೀಡಿದ್ದು ಭೂಮಾಲೀಕರು, ಸರ್ಕಾರಿ ಇಲಾಖೆಗಳು, ಖಾಸಗಿ ಸಂಸ್ಥೆಗಳು ಇ.ವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಹಾಗೂ ಬೆಸ್ಕಾಂನಿಂದ ತ್ವರಿತವಾಗಿ ವಿದ್ಯುತ್ ಸಂಪರ್ಕ ಪಡೆಯಲು ಪೋರ್ಟಲ್ ಮೂಲಕ ಅವಕಾಶ ಕಲ್ಪಿಸಲಾಗಿದೆ.

ನಗರ ಹಾಗೂ ಹೆದ್ದಾರಿಗಳಲ್ಲಿ ಇ.ವಿ ಮೂಲಸೌಕರ್ಯಗಳನ್ನು ತ್ವರಿತವಾಗಿ ಸ್ಥಾಪಿಸಲು ಭೂ ಮಾಲೀಕರು ಮತ್ತು ಚಾರ್ಜಿಂಗ್ ಆಪರೇಟರ್ಗಳಿಗೆ ಈ ಪೋರ್ಟಲ್ ನೆರವಾಗಲಿದೆ. ಇ.ವಿ ಹಬ್ಗಳ ನಿರ್ಮಾಣವನ್ನು ಉತ್ತೇಜಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿಯ ಇ.ವಿ ವಿಭಾಗ ಬೆಸ್ಕಾಂ ಜೊತೆ ಕೈಜೋಡಿಸಿದೆ.

ಈ ಪೋರ್ಟಲ್ ಮೂಲಕ ಭೂ ಮಾಲೀಕರು ತಮ್ಮ ಭೂಮಿಯನ್ನು ಇ.ವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಆದಾಯ ಹಂಚಿಕೆ ಆಧಾರದ ಮೇಲೆ ಬಾಡಿಗೆಗೆ ಅಥವಾ ಭೋಗ್ಯಕ್ಕೆ ನೀಡಲು ಅವಕಾಶ ಇದೆ. ಅದೇ ರೀತಿ ವಿತರಕರು ಮತ್ತು ಚಾರ್ಜ್ ಪಾಯಿಂಟ್ ಆಪರೇಟರ್ಗಳು ಇ.ವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ, ಕಾರ್ಯಾಚರಣೆ ಹಾಗೂ ನಿರ್ವಹಣೆ ವಹಿಸಿಕೊಳ್ಳಬಹುದು.

ಸಾರ್ವಜನಿಕ–ಖಾಸಗಿ ಸಹಭಾಗಿತ್ವವನ್ನು ಬಲಪಡಿಸಿ, ಸ್ಥಳೀಯವಾಗಿ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ. ಇ.ವಿ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಯನ್ನು ಸುಲಭಗೊಳಿಸಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎನ್. ಶಿವಶಂಕರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.