ಮಂಗಳವಾರ, ಜನವರಿ 28, 2020
22 °C

ಇವಿಎಂನಿಂದ ಸೋಲು - ಕೆ.ಬಿ.ಕೋಳಿವಾಡ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ವಿದ್ಯುನ್ಮಾನ ಮತಯಂತ್ರ (ಇವಿಎಂ) ಹ್ಯಾಕ್ ಮಾಡಿದ್ದ ಕಾರಣಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ’ ಎಂದು ರಾಣೇಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋತಿರುವ ಕೆ.ಬಿ.ಕೋಳಿವಾಡ ಆರೋಪಿಸಿದ್ದಾರೆ.

‘ಇವಿಎಂ ಹ್ಯಾಕ್ ಮಾಡಿದ್ದರಿಂದ ಪಕ್ಷದ ಅಭ್ಯರ್ಥಿಗಳು ಸೋತಿದ್ದಾರೆ ಎಂಬ ವಿಚಾರವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ನನಗೆ ತಿಳಿಸಿದ್ದಾರೆ. ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಈ ವಿಚಾರಸ್ಪಷ್ಟಪಡಿಸಿದರು’ ಎಂದು ಹೇಳಿದ್ದಾರೆ.

‘ಎಂಜಿನಿಯರೊಬ್ಬರು ಇವಿಎಂ ಸಮೇತ ಸಿದ್ದರಾಮಯ್ಯ ಮನೆಗೆ ಬಂದಿದ್ದರಂತೆ. ಹ್ಯಾಕ್ ಹೇಗೆ ಮಾಡುತ್ತಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮತದಾನಕ್ಕೆ ಇವಿಎಂ ಬಳಸುವವರೆಗೂ ಬಿಜೆಪಿ ಗೆಲ್ಲುತ್ತಲೇ ಇರುತ್ತದೆ. ಈ ಬಗ್ಗೆ ರಾಷ್ಟ್ರವ್ಯಾಪಿ ಹೋರಾಟ ಮಾಡಬೇಕಾಗಿದೆ’ ಎಂದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು