ಶನಿವಾರ, ಮೇ 15, 2021
25 °C

ಮಾಜಿ ಪಾಲಿಕೆ ಸದಸ್ಯೆ ವಾಣಿ.ವಿ.ರಾವ್‌ ಪತಿ ಕೋವಿಡ್‌ನಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿ.ವಿ.ಪುರ ವಾರ್ಡ್‌ನ ನಿಕಟಪೂರ್ವ ಪಾಲಿಕೆ ಸದಸ್ಯೆ ವಾಣಿ.ವಿ.ರಾವ್‌ ಅವರ ಪತಿ ಕುಮಾರ್‌ ಪಿ.ಕೆ.(54) ಅವರು ಕೋವಿಡ್‌ನಿಂದ ಶನಿವಾರ ಮುಂಜಾನೆ ಕೊನೆಯುಸಿರೆಳೆದರು.

‘ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂರು ದಿನಗಳ ಹಿಂದೆ ಮಾವಳ್ಳಿಯ ಸೌತ್‌ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ರಕ್ತದಲ್ಲಿ ಆಮ್ಲಜನಕದ ಪ್ರಮಾಣವೂ ಶುಕ್ರವಾರ ರಾತ್ರಿ ವೇಳೆ ಶೇ 92ಕ್ಕೆ ಏರಿಕೆ ಕಂಡಿತ್ತು. ಆದರೆ, ಮಧ್ಯ ರಾತ್ರಿ ರಕ್ತದಲ್ಲಿ ಆಮ್ಲಜನಕರ ಪ್ರಮಾಣ ಏಕಾಏಕಿ ಕುಸಿತ ಕಂಡಿತ್ತು’ ಎಂದು ಅವರ ಕುಟುಂಬಸ್ಥರೊಬ್ಬರು ಮಾಹಿತಿ ನೀಡಿದರು.

ಅವರ ಅಂತ್ಯಕ್ರಿಯೆಯನ್ನು ಬನಶಂಕರಿಯ ಚಿತಾಗಾರದಲ್ಲಿ ಶನಿವಾರ ನೆರವೇರಿಸಲಾಯಿತು ಎಂದು ಅವರು ತಿಳಿಸಿದರು.

ಕುಮಾರ್‌ ಪಿ.ಕೆ. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು