ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಿ ವೀಕ್‌’ ಪತ್ರಿಕೆಯ ನಿವೃತ್ತ ಸಂಪಾದಕ ಟಿ.ಆರ್‌.ಗೋಪಾಲಕೃಷ್ಣನ್‌ ನಿಧನ

Published 15 ನವೆಂಬರ್ 2023, 15:51 IST
Last Updated 15 ನವೆಂಬರ್ 2023, 15:51 IST
ಅಕ್ಷರ ಗಾತ್ರ

ಬೆಂಗಳೂರು: ‘ದಿ ವೀಕ್‌’ ಪತ್ರಿಕೆಯ ನಿವೃತ್ತ ಸಂಪಾದಕ ಟಿ.ಆರ್‌.ಗೋಪಾಲಕೃಷ್ಣನ್‌ (74) ಅವರು ಬುಧವಾರ ನಿಧನರಾದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೃತರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ 12ಕ್ಕೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ವಿದ್ಯುತ್‌ ಚಿತಾಗಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ದೆಹಲಿ ಸೇರಿದಂತೆ ಬೇರೆ ಬೇರೆ ನಗರಗಳಲ್ಲಿ ಕೆಲಸ ಮಾಡಿದ್ದ ಅವರು, ‘ದಿ ವೀಕ್‌’ ಪತ್ರಿಕೆಯಿಂದ ನಿವೃತ್ತರಾದ ಮೇಲೆ ಕುಟುಂಬದ ಸದಸ್ಯರ ಜತೆಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಎರಡು ತಿಂಗಳ ಹಿಂದೆ ಗೋಪಾಲಕೃಷ್ಣನ್‌ ಅವರ ಪತ್ನಿ ನಿಧನರಾಗಿದ್ದರು.

‘ಟಿಆರ್‌ಜಿ’ ಎಂದೇ ಪ್ರಸಿದ್ಧರಾಗಿದ್ದ ಗೋಪಾಲಕೃಷ್ಣನ್‌ ಅವರು, ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಮದರ್‌ ಲ್ಯಾಂಡ್‌ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭಿಸಿ, ಇಂಡಿಯಾ ಟುಡೇ, ಹಿಂದೂಸ್ತಾನ್‌ ಟೈಮ್ಸ್‌, ಮುಂಬೈನ ‘ಸೂಪರ್‌’ ಸಿನಿಮಾ ಪತ್ರಿಕೆ ಸಹಾಯಕ ಸಂಪಾದಕರಾಗಿ ಕೆಲಸ ಮಾಡಿದ್ದರು.

1983ರಲ್ಲಿ ‘ದಿ ವೀಕ್‌’ ಪತ್ರಿಕೆ ಸೇರಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಸಂಪಾದಕರಾಗಿ ನಿವೃತ್ತರಾಗಿದ್ದರು. ನಿವೃತ್ತಿ ನಂತರ ‘ಸಿಟಿಜನ್‌ ಮ್ಯಾಟರ್ಸ್‌’ ಪತ್ರಿಕೆಯ ಸಲಹಾ ಸಂಪಾದಕರಾಗಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT