ಬೆಂಗಳೂರು: ರಾಜ್ಯದಲ್ಲಿ 1ರಿಂದ 9ನೇ ತರಗತಿಯ ಮಕ್ಕಳಿಗೆ ಪರೀಕ್ಷೆ ನಡೆಸಬೇಕೆ, ಬೇಡವೇ ಎಂಬುದರ ಕುರಿತು ಸೋಮವಾರ (ಏ.5) ಮಹತ್ವದ ಸಭೆ ನಡೆಯಲಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಶಿಕ್ಷಣ ತಜ್ಞರು, ಖಾಸಗಿ ಶಾಲಾ ಸಂಘಟನೆಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

1ರಿಂದ 9ನೇ ತರಗತಿಗಳಿಗೆ ಲಿಖಿತ ಪರೀಕ್ಷೆ ನಡೆಸದಿರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಲಿಖಿತ ಪರೀಕ್ಷೆ ಬದಲು ಮೌಲ್ಯಾಂಕನ ಪರೀಕ್ಷೆ ನಡೆಸಿ ಮುಂದಿನ ತರಗತಿಗೆ ತೇರ್ಗಡೆ ನೀಡುವ ಬಗ್ಗೆ, ಮೌಲ್ಯಾಂಕನ ಯಾವ ರೀತಿ ಮಾಡಬೇಕು? ಒಂದೆರಡು ದಿನ ಮಕ್ಕಳನ್ನು ಶಾಲೆಗೆ ಕರೆಸಿ ಅವರಿಗೆ ಪ್ರಶ್ನೆಗಳನ್ನು ಕೇಳಿ ಅವರ ಕಲಿಕಾ ಸಾಮರ್ಥ್ಯ ಅಳೆಯಬೇಕಾ ಎಂಬ ವಿಚಾರಗಳು ಸಭೆಯಲ್ಲಿ ಚರ್ಚೆಯಾಗಲಿವೆ.

ಈ ಮಧ್ಯೆ ಸರ್ಕಾರಿ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆಯೇ ಆರಂಭವಾಗದ ಕಾರಣ ಮೌಲ್ಯಾಂಕನವೂ ಅಗತ್ಯವಿಲ್ಲ ಎಂಬ ಅಭಿಪ್ರಾಯವೂ ಸರ್ಕಾರದ ಮುಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.