ಬೆಂಗಳೂರು: ಪಿಡಿಒ, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸು ಮಾಡಿಸುವುದಾಗಿ ನಂಬಿಸಿ ಅಭ್ಯರ್ಥಿಗಳು ಹಾಗೂ ಅವರ ಪೋಷಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಮತ್ತೊಬ್ಬ ಆರೋಪಿಯನ್ನು ನಗರದ ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಪ್ರೌಢಶಾಲಾ ಶಿಕ್ಷಕ ಸಿಕಂದರ್ ಚೌಧರಿ(44) ಬಂಧಿತ ಆರೋಪಿ.

ಆರೋಪಿಯಿಂದ ₹25 ಲಕ್ಷ ನಗದು, ಮೊಬೈಲ್ ಹಾಗೂ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಈ ಹಿಂದೆ ವಿಜಯನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ರೈಲ್ವೆ ಇಲಾಖೆಯ ಪ್ರಧಾನ ಟಿಕೆಟ್ ಇನ್ಸ್ಪೆಕ್ಟರ್ ಗೋವಿಂದರಾಜ್ ಹಾಗೂ ಇಬ್ಬರು ಮಧ್ಯವರ್ತಿಗಳನ್ನು ಬಂಧಿಸಿದ್ದರು. ವಂಚನೆ ಜಾಲದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

‘ಗಾಂಧಿನಗರದ ವೈ.ರಾಮಚಂದ್ರ ರಸ್ತೆಯಲ್ಲಿರುವ ಸಜ್ಜನ್ ಲಾಡ್ಜ್ನಲ್ಲಿ ತಂಗಿದ್ದ ಸಿಕಂದರ್ ಚೌಧರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಲಾಯಿತು. ಮಧ್ಯವರ್ತಿಗಳ ಮೂಲಕ ಕೆಎಎಸ್, ಪಿಡಿಒ, ಪಿಎಸ್ಐ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿರುವ ಪರೀಕ್ಷಾರ್ಥಿಗಳನ್ನು ಸಂಪರ್ಕಿಸುತ್ತಿದ್ದ. ಲಾಡ್ಜ್ನಲ್ಲಿ ಕುಳಿತು ಕಾರ್ಯಾಚರಣೆ ನಡೆಸುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಆರೋಪಿ ಜತೆಗೆ ಇನ್ನೂ ಹಲವರು ಸಂಪರ್ಕದಲ್ಲಿ ಇರುವ ಮಾಹಿತಿ ಸಿಕ್ಕಿದೆ. ಕಾರ್ಯಾಚರಣೆ ಮುಂದುವರೆಸಲಾಗಿದೆ’ ಎಂದು ಪೊಲೀಸರು ಹೇಳಿದರು.
.ಸ್ಪರ್ಧಾತ್ಮಕ ಪರೀಕ್ಷೆ ಪಾಸ್ ಮಾಡಿಸುವ ಜಾಲ: ಮಧ್ಯವರ್ತಿಗಳ ಸೆರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.