ಸೋಮವಾರ, ಮೇ 23, 2022
30 °C

ಅಬಕಾರಿ ಗಸ್ತು: 198 ಲೀಟರ್ ಮದ್ಯ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಬಕಾರಿ ಪೊಲೀಸರು ನಗರದ ಮೂರು ಕಡೆ ದಾಳಿ ಮಾಡಿದ್ದು, ಅಕ್ರಮವಾಗಿ ಮಾರಲು ಯತ್ನಿಸುತ್ತಿದ್ದ 198 ಲೀಟರ್ ಮದ್ಯವನ್ನು ಜಪ್ತಿ ಮಾಡಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ಹಲವೆಡೆ ಅಬಕಾರಿ ಪೊಲೀಸರು ಗಸ್ತು ತಿರುಗಿದರು.

‘ಜೆ.ಪಿ. ನಗರ 7ನೇ ಹಂತದ ಆವಲಹಳ್ಳಿ ಮತ್ತು ತಿಪ್ಪಸಂದ್ರಗಳಲ್ಲಿ ಅಕ್ರಮವಗಿ ಮದ್ಯ ಮಾರುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಮೂರು ಪ್ರತ್ಯೇಕ ತಂಡಗಳಲ್ಲಿ ದಾಳಿ ನಡೆಸಿ ಇಬ್ಬರು ಮಹಿಳೆಯರು ಸೇರಿ ಮೂವರನ್ನು ಬಂಧಿಸಲಾಗಿದೆ. ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟುಕೊಂಡು ಆರೋಪಿಗಳು ಮಾರಾಟ ಮಾಡುತ್ತಿದ್ದರಿ’ ಎಂದು ಅಬಕಾರಿ ಪೊಲೀಸ್ ಮೂಲಗಳು ಹೇಳಿವೆ.

'ಉಪವಿಭಾಗ 15ರ ಅಬಕಾರಿ ಉಪ ಅಧೀಕ್ಷಕ ಚಂದ್ರಶೇಖರ್ ಮತ್ತು ಕೋಣನಕುಂಟೆ ವಲಯ ಅಬಕಾರಿ ನಿರೀಕ್ಷಕಿ ಎಂ.ಆರ್. ಶೋಭಾ ನೇತೃತ್ವದಲ್ಲಿ ದಾಳಿ ನಡೆಯಿತು’ ಎಂದೂ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು