ಬೆಂಗಳೂರು: ಹೊಸ ವರ್ಷದ ಆಚರಣೆ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಸಜ್ಜಾಗಿದ್ದ ಇಬ್ಬರು ಆರೋಪಿಗಳನ್ನು ಅಬಕಾರಿಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹12 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ.

ಮಣಿ ಮತ್ತು ರಾಮು ಬಂಧಿತರು. ಆರೋಪಿಗಳು ಬೇರೆಯವರ ಕಾರ್ಡ್ ಬಳಸಿ, ಮಿಲಿಟರಿ ಕ್ಯಾಂಟೀನ್‌ಗಳಲ್ಲಿ ಮದ್ಯ ಖರೀದಿಸಿದ್ದರು. ಸರ್ಕಾರಕ್ಕೆ ವಂಚಿಸಿ, ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯವನ್ನು ಹೊಸ ವರ್ಷಕ್ಕೆ ರೆಸ್ಟೋರೆಂಟ್‌ಗಳಲ್ಲಿ ನಡೆಯುವ ಪಾರ್ಟಿಗಳಿಗೆ ಕಡಿಮೆ ಬೆಲೆಗೆ ಮಾರಲು ಯತ್ನಿಸಿದ್ದರು.

‘ಈ ಸಂಬಂಧ ಅಬಕಾರಿ ಇಲಾಖೆಗೆ ಮಾಹಿತಿ ಬಂದಿತ್ತು. ಇದರನ್ವಯ ಅಬಕಾರಿ ಡಿಸಿ ವೀರಣ್ಣ ಬಾಗೇವಾಡಿ ನೇತೃತ್ವದ ತಂಡ ದಾಳಿ ನಡೆಸಿದಾಗ, ಈ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದೆ’ ಎಂದು ಅಬಕಾರಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.