ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರ್ಮಿಕ ಕಾನೂನುಗಳಿಂದ ವಿನಾಯಿತಿ ಕೊಡಿ: ಸಚಿವೆ ಕರಂದ್ಲಾಜೆಗೆ ರಾಜಗೋಪಾಲ್ ಮನವಿ

Published : 6 ಆಗಸ್ಟ್ 2024, 15:36 IST
Last Updated : 6 ಆಗಸ್ಟ್ 2024, 15:36 IST
ಫಾಲೋ ಮಾಡಿ
Comments

ಬೆಂಗಳೂರು: ‘ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ (ಎಂಎಸ್‌ಎಂಇ) ಸಾಮಾನ್ಯ ಕನಿಷ್ಠ ವೇತನ ನೀತಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿ ಕಾಸಿಯಾ ಅಧ್ಯಕ್ಷ ಎಂ.ಜಿ.ರಾಜಗೋಪಾಲ್‌ ನೇತೃತ್ವದ ನಿಯೋಗ ಕೇಂದ್ರ ಸಣ್ಣ, ಮಧ್ಯಮ ಕೈಗಾರಿಕೆ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಪತ್ರ ಸಲ್ಲಿಸಿತು.

ಸೋಮವಾರ ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ನಿಯೋಗ, ‘50 ಅಥವಾ ಅದಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಕೈಗಾರಿಕೆಗಳಿಗೆ ಕಾರ್ಮಿಕ ಕಾನೂನುಗಳಿಂದ ವಿನಾಯಿತಿ ನೀಡಬೇಕು. ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರ, ಕಾರ್ಮಿಕರ ವಿಷಯಗಳು ಸೇರಿದಂತೆ, ಎಂಎಸ್‌ಎಂಇ ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿತು.

ಎಂಎಸ್ಎಂಇಗಳನ್ನು ಆದ್ಯತೆಯ ಸಾಲಕ್ಕಾಗಿ ಪರಿಗಣಿಸಲಾಗಿದ್ದರೂ, ಬ್ಯಾಂಕುಗಳು ವಿಧಿಸುತ್ತಿರುವ ಬಡ್ಡಿ ದರ ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳಿಗೆ ನೀಡುವ ಸಾಲದ ಬಡ್ಡಿ ದರಕ್ಕಿಂತ ಅಧಿಕವಾಗಿದೆ. ಎಂಎಸ್‌ಎಂಇಗಳು ಪಡೆಯುವ ಸಾಲದ ಬಡ್ಡಿಯ ದರವನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.

ರಾಷ್ಟ್ರೀಯ ಸ್ಟಾಕ್‌ ಎಕ್ಸ್‌ಚೇಂಜ್‌, ಎನ್‌ಎಸ್‌ಇಆರ್‌ಎಂಎ ಯೋಜನೆಯ ಬಡ್ಡಿ ರಿಯಾಯಿತಿ, ಎನ್.ಎಸ್.ಐ.ಸಿ ಯ ಕಚ್ಚಾ ವಸ್ತುಗಳ ನೆರವು ಯೋಜನೆಯ ಬಡ್ಡಿ ರಿಯಾಯಿತಿ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಚಿವರಿಗೆ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT