ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿನಿಮಾ ಛಾಯಾಚಿತ್ರಗಳ ಪ್ರದರ್ಶನ

Last Updated 1 ಸೆಪ್ಟೆಂಬರ್ 2022, 21:23 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಗತಿ ಅಶ್ವತ್ಥನಾರಾಯಣ ತಮ್ಮ ವೃತ್ತಿ ಬದುಕಿನಲ್ಲಿ ಸೆರೆ ಹಿಡಿದಿರುವ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಸೆಪ್ಟೆಂಬರ್ 2ರಿಂದ 4ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿದೆ.

ಶುಕ್ರವಾರ (ಸೆ. 2) ಬೆಳಿಗ್ಗೆ 10.30ಕ್ಕೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಪ್ರದರ್ಶನವನ್ನು ಉದ್ಘಾಟನೆ ಮಾಡಲಿದ್ದಾರೆ. ನಟ ಶ್ರೀನಾಥ್, ಟಿ.ಎಸ್ ನಾಗಾಭರಣ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು, ಪ್ರಮುಖ ಸಭೆ– ಸಮಾರಂಭಗಳು, ಕನ್ನಡ ಸಾಹಿತಿಗಳು ಮತ್ತು ಹಿಂದಿ ಚಿತ್ರರಂಗದ ಹಿಂದಿನ ತಾರೆಯರ ಕಲಾತ್ಮಕ ಛಾಯಾಚಿತ್ರಗಳ ಪ್ರದರ್ಶನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT