ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೊಟ್ಟಣ ಬದಲಿಸಿ ಆಹಾರ ಮಾರಾಟ: ಸಿಸಿಬಿ ದಾಳಿ

Published 14 ಡಿಸೆಂಬರ್ 2023, 16:19 IST
Last Updated 14 ಡಿಸೆಂಬರ್ 2023, 16:19 IST
ಅಕ್ಷರ ಗಾತ್ರ

ಬೆಂಗಳೂರು: ಅವಧಿ ಮೀರಿದ ಆಹಾರ ವಸ್ತುಗಳನ್ನು ಹೊಸ ಪೊಟ್ಟಣಕ್ಕೆ ತುಂಬಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಸಿದ್ದಾಪುರ ಬಳಿಯ ಎಚ್‌.ಎಂ. ಟ್ರೇಡರ್ಸ್ ಮಳಿಗೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ.

‘ಹಲವು ಕಂಪನಿಗಳ ಅವಧಿ ಮೀರಿದ ಆಹಾರವನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿದ್ದ ಆರೋಪಿ, ಪೊಟ್ಟಣ ಬದಲಿಸಿ ಮಾರಾಟ ಮಾಡುತ್ತಿದ್ದ. ಇಂಥ ಆಹಾರ ಸೇವನೆಯಿಂದ ಜನರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಕೃತ್ಯದ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ₹ 10 ಲಕ್ಷ ಮೌಲ್ಯದ ಚಾಕೊಲೇಟ್ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಸಿಸಿಬಿ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT