ಬೆಂಗಳೂರು: ಮಾಗಡಿ ರಸ್ತೆಯಲ್ಲಿರುವ ಗೋಪಾಲಪುರ ಬಳಿಯ ಆಹಾರ ತಯಾರಿಕೆ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಸ್ಪೋಟ ಸಂಭವಿಸಿದ್ದು, ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ.

'ಕಾರ್ಮಿಕರಾದ ಸೌರಭ್ ಹಾಗೂ ಸಚಿನ್ ಮೃತರು. ಶಾಂತಿ, ಮನೀಷ್ ಸೇರಿ ನಾಲ್ವರು ಗಾಯಗೊಂಡಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ' ಎಂದು ಮೂಲಗಳು ಹೇಳಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸುತ್ತಿದ್ದಾರೆ.

ಏಳು ಕಾರ್ಮಿಕರು ಕೆಲಸಕ್ಕೆ ಬಂದಿದ್ದರು. ಆಹಾರ ತಯಾರಿಕೆಗೆ ಬಳಸುವ ಅನಿಲದ ಸಿಲಿಂಡರ್ ಸೋರಿಕೆಯಾಗಿದೆ. ಅದರಿಂದ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ ಎನ್ನಲಾಗಿದ್ದು, ಇಡೀ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ.

ಕಾರ್ಖಾನೆಯಲ್ಲಿ ಬಾಯ್ಲರ್ ಹಾಗೂ 15 ವಾಣಿಜ್ಯ ಬಳಕೆ ಸಿಲಿಂಡರ್‌ಗಳು ಇದ್ದವು ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.