ಸೋಮವಾರ, ಸೆಪ್ಟೆಂಬರ್ 26, 2022
22 °C
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಿಸಿಕೆ

ಎಕ್ಸ್‌ಪ್ರೆಸ್ ಕ್ಲಿನಿಕ್ ದೇಶಕ್ಕೆ ಮಾದರಿ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಲ್ಲೇಶ್ವರದಲ್ಲಿ ನಿರ್ಮಿಸಿರುವ ಹೈಟೆಕ್ ಡಯಾಗ್ನಾಸ್ಟಿಕ್ ಸೇವೆಗಳ ಎಕ್ಸ್‌ಪ್ರೆಸ್‌ ಕ್ಲಿನಿಕ್, ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಎಸ್ಕಲೇಟರ್ ಸಹಿತ ಪಾದಚಾರಿ ಮಾರ್ಗವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಮಲ್ಲೇಶ್ವರದ ಈ ಮಾದರಿ ಕ್ಲಿನಿಕ್ ದೇಶ ಮತ್ತು ರಾಜ್ಯಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ. ಈ ವರ್ಷ ನಗರದಲ್ಲಿ 20 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಇದೇ ಮಾದರಿಯಲ್ಲಿ ನಿರ್ಮಿಸಲಾಗುವುದು. ಮುಂದಿನ ಮೂರು ತಿಂಗಳಲ್ಲಿ ನಗರದ 243 ವಾರ್ಡ್‌ಗಳಲ್ಲೂ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗುವುದು’ ಎಂದರು.

‘ಜಯದೇವ ಆಸ್ಪತ್ರೆಯ ನಾಲ್ಕು ಕೇಂದ್ರಗಳನ್ನು ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಇವುಗಳ ಪೈಕಿ 50 ಹಾಸಿಗೆಗಳ ಒಂದು ಕೇಂದ್ರವು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಿರ್ಮಿಸಲಾಗುತ್ತಿದೆ. ಸದ್ಯದಲ್ಲೇ ಚಾಲನೆ ನೀಡಲಾಗುವುದು’ ಎಂದು ಹೇಳಿದರು.

ಸಚಿವ ಅಶ್ವತ್ಥನಾರಾಯಣ ಮಾತನಾಡಿ, ಮಲ್ಲೇಶ್ವರಂ ಕ್ಷೇತ್ರದ ಎಲ್ಲ ಏಳು ವಾರ್ಡುಗಳಲ್ಲೂ ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗುವುದು. ಈಗಾಗಲೇ ಸುಬ್ರಹ್ಮಣ್ಯ ನಗರ ಮತ್ತು ಅರಮನೆ ನಗರಗಳಲ್ಲಿ ಇದರ ಕಾಮಗಾರಿ ನಡೆಯುತ್ತಿದೆ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು