ಶನಿವಾರ, 30 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಾಸ್‌ ಅವಧಿ ಮೇ 3ರವರೆಗೆ ವಿಸ್ತರಣೆ; ಹೊಸ ಪಾಸ್ ಕೊಡಲ್ಲ’

Last Updated 19 ಏಪ್ರಿಲ್ 2020, 17:56 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕರಿಗೆ ಅಗತ್ಯ ಸೇವೆ ಸಲ್ಲಿಸುವವರಿಗೆ ಪೊಲೀಸ್ ಇಲಾಖೆ ನೀಡಿರುವ ಪಾಸ್‌ಗಳ ಅವಧಿಯನ್ನು ಮೇ 3 ರವರೆಗೆ ವಿಸ್ತರಣೆ ಮಾಡಲಾಗಿದೆ. ಲಾಕ್‌ಡೌನ್‌ ಮುಂದುವರಿದಿರುವುದರಿಂದ ಇಲಾಖೆ ಈ ತೀರ್ಮಾನ ಕೈಗೊಂಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ‘ಈಗಾಗಲೇ ನೀಡಿರುವ ಪಾಸ್‌ಗಳ ಅವಧಿ ಮೇ 3ರವರೆಗೆ ಇರಲಿದೆ’ ಎಂದಿದ್ದಾರೆ.

‘ಇನ್ನು ಮುಂದೆ ಯಾವುದಕ್ಕೂ ಹೊಸದಾಗಿ ಪಾಸ್ ಕೊಡುವುದಿಲ್ಲ. ನಿಗದಿತ ಉದ್ದೇಶಕ್ಕೆ ಮಾತ್ರ ಪಾಸ್‌ ಬಳಕೆ ಮಾಡಬೇಕು. ಪಾಸ್‌ ಇದೆ ಎಂದು ಬೇಕಾಬಿಟ್ಟಿಯಾಗಿ ಓಡಾಡಿದರೆ ದಂಡ ತೆರಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT