ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಆಯೋಗದ ಅವಧಿ 6 ತಿಂಗಳು ವಿಸ್ತರಣೆ

Published 16 ಮೇ 2023, 20:41 IST
Last Updated 16 ಮೇ 2023, 20:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ರಚಿಸಲಾಗಿರುವ 7ನೇ ವೇತನ ಆಯೋಗದ ಅವಧಿಯನ್ನು 6 ತಿಂಗಳು ವಿಸ್ತರಿಸಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ  ಸುಧಾಕರ್‌ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19ರಂದು 7ನೇ ವೇತನ ಆಯೋಗ ರಚಿಸಲಾಗಿತ್ತು.

ವೇತನ ಪರಿಷ್ಕರಣೆ ಕುರಿತು ಸರ್ಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳ ಜತೆ ವೇತನ ಆಯೋಗ ನಡೆಸುತ್ತಿರುವ ಸಮಾಲೋಚನಾ ಕಾರ್ಯಗಳು ಪ್ರಗತಿಯಲ್ಲಿವೆ. ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳಿಸಲು ಸಮಯಾವಕಾಶದ ಅಗತ್ಯವಿರುವ ಕಾರಣ ಅವಧಿಯನ್ನು ಮೇ 19ರಿಂದ ಅನ್ವಯವಾಗುವಂತೆ 6 ತಿಂಗಳು ವಿಸ್ತರಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT