ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂಬಾರ ಸಮಾಜದ ಕುಲಶಾಸ್ತ್ರೀಯ ಅಧ್ಯಯನ: ಅನುದಾನಕ್ಕೆ ಆಗ್ರಹ

Published 15 ಡಿಸೆಂಬರ್ 2023, 16:15 IST
Last Updated 15 ಡಿಸೆಂಬರ್ 2023, 16:15 IST
ಅಕ್ಷರ ಗಾತ್ರ

ಬೆಂಗಳೂರು: ಕುಂಬಾರ ಸಮಾಜದ ಕುಲಶಾಸ್ತ್ರೀಯ ಅಧ್ಯಯನ ಹಾಗೂ ಅಭಿವೃದ್ಧಿ ನಿಗಮಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘ ಆಗ್ರಹಿಸಿದೆ. 

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಕರಿಸಿದ್ದಪ್ಪ, ‘ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗವು ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆ ಮೂಲಕ ಕುಂಬಾರ ಕುಲಶಾಸ್ತ್ರೀಯ ಅಧ್ಯಯನ ನಡೆಸುತ್ತಿದೆ. ಈ ಸಮಾಜದಲ್ಲಿ 18 ಉಪಜಾತಿಗಳನ್ನು ಗುರುತಿಸಲಾಗಿದೆ. ಈ ಅಧ್ಯಯನಕ್ಕೆ 2022ರಲ್ಲಿ ₹ 6.25 ಲಕ್ಷ ಹಣ ಬಿಡುಗಡೆ ಮಾಡಲಾಗಿತ್ತು. ಈ ಹಣ ಸಂಪೂರ್ಣ ವೆಚ್ಚವಾಗಿದ್ದು, ಸಂಶೋಧನಾ ಸಂಸ್ಥೆಯು ₹13.75 ಲಕ್ಷ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಅಗತ್ಯ ಅನುದಾನವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು. 

ಸಮುದಾಯದ ಮುಖಂಡ ಎಂ.ರಾಜು, ‘ಕುಂಬಾರ ಸಮುದಾಯದ ಅಭಿವೃದ್ಧಿ ನಿಗಮ 2023ರ ಮಾರ್ಚ್‌ನಲ್ಲಿ ಸ್ಥಾಪನೆಯಾಗಿದ್ದರೂ ಅಧ್ಯಕ್ಷರ ನೇಮಕಾತಿ ನಡೆಯಲಿಲ್ಲ. ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಅರ್ಹ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು. ನಿಗಮಕ್ಕೆ ₹ 100 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಇದರಿಂದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ ಸಾಧ್ಯವಾಗುತ್ತದೆ’ ಎಂದು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT