ಭಾನುವಾರ, ಆಗಸ್ಟ್ 1, 2021
27 °C

₹ 15 ಲಕ್ಷ ಪಡೆದು ವಂಚಿಸಿದ ಫೇಸ್‌ಬುಕ್ ಗೆಳೆಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ನಗರದ 55 ವರ್ಷದ ಶಿಕ್ಷಕಿಯೊಬ್ಬರಿಗೆ ಉಡುಗೊರೆ ಆಮಿಷವೊಡ್ಡಿ ₹ 15 ಲಕ್ಷ ಪಡೆದುಕೊಂಡು ವಂಚಿಸಿದ್ದಾನೆ. ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

’ರಾಮಮೂರ್ತಿನಗರದ ಶಿಕ್ಷಕಿ ದೂರು ನೀಡಿದ್ದಾರೆ. ಆರೋಪಿ ಡಾ. ಕೇವಿನ್ ಫೈವ್ ಹಾಗೂ ಇತರರ ವಿರುದ್ಧ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಶಿಕ್ಷಕಿ ಹಾಗೂ ಡಾ. ಕೇವಿನ್, ಫೇಸ್‌ಬುಕ್‌ನಲ್ಲಿ ಚಾಟಿಂಗ್ ಮಾಡುತ್ತಿದ್ದರು. ’ಚಿನ್ನಾಭರಣ, ನಗದು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಉಡುಗೊರೆ ನೀಡುತ್ತೇನೆ’ ಎಂಬುದಾಗಿ ಹೇಳಿದ್ದ ಕೇವಿನ್, ವಿಳಾಸ ಸಹ ಪಡೆದುಕೊಂಡಿದ್ದ.’

‘ಕೆಲ ದಿನಗಳ ನಂತರ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಶಿಕ್ಷಕಿಗೆ ಕರೆ ಮಾಡಿದ್ದ ಆರೋಪಿಗಳು, ಶುಲ್ಕ ಪಾವತಿ ಮಾಡಿದರೆ ಉಡುಗೊರೆಯನ್ನು ಮನೆಗೆ ಕಳುಹಿಸುವುದಾಗಿ ಹೇಳಿದ್ದರು. ಅದನ್ನು ನಂಬಿದ್ದ ಶಿಕ್ಷಕಿ, ಆರೋಪಿಗಳು ಸೂಚಿಸಿದ್ದ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ₹ 15 ಲಕ್ಷ ಹಣ ಜಮೆ ಮಾಡಿದ್ದಾರೆ. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆರೋಪಿ ನಾಪತ್ತೆಯಾಗಿದ್ದಾನೆ’ ಎಂದೂ ಪೊಲಿಸರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು