ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 3.63 ಲಕ್ಷ ಕಿತ್ತ ಫೇಸ್‌ಬುಕ್‌ ಸ್ನೇಹಿತ

Last Updated 21 ಮೇ 2021, 15:36 IST
ಅಕ್ಷರ ಗಾತ್ರ

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಸೈಬರ್ ವಂಚಕ, ನಗರದ ನಿವಾಸಿಯೊಬ್ಬರಿಗೆ ಉಡುಗೊರೆ ಆಮಿಷವೊಡ್ಡಿ ₹ 3.63 ಲಕ್ಷ ಪಡೆದು ವಂಚಿಸಿದ್ದಾನೆ.

ವಿವೇಕನಗರದ 28 ವರ್ಷದ ಯುವಕ ವಂಚನೆ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ರೇವ್ ಪೀಟರ್ ಜಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

‘ದೂರುದಾರರಿಗೆ ಫೇಸ್‌ಬುಕ್‌ನಲ್ಲಿ ರೇವ್‌ ಪೀಟರ್ ಜಾನ್ ಪರಿಚಯವಾಗಿತ್ತು. ವಿದೇಶದಲ್ಲಿರುವ ಚರ್ಚ್‌ನಲ್ಲಿ ಪಾದ್ರಿಯಾಗಿರುವುದಾಗಿ ಹೇಳಿದ್ದ ಜಾನ್, ದೂರುದಾರರ ಸ್ನೇಹವನ್ನು ಮೆಚ್ಚಿ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದ’ ಎಂದು ಪೊಲೀಸರು ಹೇಳಿದರು.

‘ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿ ಸೋಗಿನಲ್ಲಿ ದೂರುದಾರರಿಗೆ ಕರೆ ಮಾಡಿದ್ದ ಆರೋಪಿ, ‘ನಿಮ್ಮ ಸ್ನೇಹಿತ ಜಾನ್ ಉಡುಗೊರೆ ಕಳುಹಿಸಿದ್ದಾರೆ. ಅಮೆರಿಕ್ ಡಾಲರ್ ಹಾಗೂ ಬೆಲೆಬಾಳುವ ವಸ್ತುಗಳು ಇವೆ. ಅದನ್ನು ಬಿಡಿಸಿಕೊಳ್ಳಲು ಶುಲ್ಕ ಪಾವತಿಸಬೇಕು’ ಎಂದಿದ್ದರು. ಅದನ್ನು ನಂಬಿದ್ದ ದೂರುದಾರ, ಆರೋಪಿ ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ₹ 3.63 ಲಕ್ಷ ಜಮೆ ಮಾಡಿದ್ದರು. ಅದಾದ ನಂತರ ಆರೋಪಿ ನಾಪತ್ತೆಯಾಗಿದ್ದಾನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT