ಭಾನುವಾರ, ಜನವರಿ 19, 2020
23 °C

ಆನಂದ್ ಸಿಂಗ್ ನಿಂದಿಸಿ ಪೋಸ್ಟ್,ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಶಾಸಕ ಆನಂದ್ ಸಿಂಗ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಕಿಶೋರ್ ಎಂಬುವರ ವಿರುದ್ಧ ಇಲ್ಲಿನ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಆನಂದ್ ಸಿಂಗ್ ಬೆಂಬಲಿಗ ಆ್ಯಂಥೋನಿ ದಾಸ್ ಮಂಗಳವಾರ ಠಾಣೆಗೆ ದೂರು ಕೊಟ್ಟಿದ್ದರು.

'ದಾಸ್ ಅವರು 'ಆನಂದ್ ಸಿಂಗ್ ಆರ್ಮಿ' ಹೆಸರಿನ ಫೇಸ್ ಬುಕ್ ಖಾತೆ ಹೊಂದಿದ್ದಾರೆ. ಅದರಲ್ಲಿ ಸಿಂಗ್ ಅವರ ಸಾಧನೆ, ಕೆಲಸಗಳನ್ನು ಅವರು ಪೋಸ್ಟ್ ಮಾಡುತ್ತಾರೆ. ಅದನ್ನು ಪ್ರಶ್ನಿಸಿ, ಕಿಶೋರ್ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದಾರೆ. ಅವರ ವಿರುದ್ಧ ದೂರು ಕೊಟ್ಟಿರುವುದರಿಂದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸ್ ಅಧಿಕಾರಿ 'ಪ್ರಜಾವಾಣಿ'ಗೆ ಮಾಹಿತಿ ನೀಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು