ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ವಿ.ಆರ್.ಮಾಲ್‌ಗೆ ಹುಸಿ ಬಾಂಬ್ ಬೆದರಿಕೆ

Published : 19 ಆಗಸ್ಟ್ 2024, 17:17 IST
Last Updated : 19 ಆಗಸ್ಟ್ 2024, 17:17 IST
ಫಾಲೋ ಮಾಡಿ
Comments

ಬೆಂಗಳೂರು: ಮಹದೇವಪುರದ ವಿ.ಆರ್.ಮಾಲ್‌ಗೆ ಸೋಮವಾರ ಮಧ್ಯಾಹ್ನ 3ರ ಸುಮಾರಿಗೆ ದುಷ್ಕರ್ಮಿಗಳು ಇ–ಮೇಲ್‌ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಮಾಲ್‌ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಇ–ಮೇಲ್‌ನಲ್ಲಿ ಬೆದರಿಕೆ ಸಂದೇಶ ಬಂದಿತ್ತು. ಅದನ್ನು ಗಮನಿಸಿದ ಮಾಲ್‌ನ ಸಿಬ್ಬಂದಿ ಗ್ರಾಹಕರಿಗೆ ತಿಳಿಸಿ, ಮುನ್ನೆಚ್ಚರಿಕೆ ಕ್ರಮಮವಾಗಿ ಎಲ್ಲರನ್ನೂ ಹೊರಕ್ಕೆ ಕಳುಹಿಸಿದ್ದರು. ಬಳಿಕ, ಪೊಲೀಸರಿಗೂ ಮಾಹಿತಿ ನೀಡಿದ್ದರು.

ಮಾಲ್‌ಗೆ ಬಂದ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು.

‘ಯಾವುದೇ ಸ್ಫೋಟಕ ವಸ್ತುಗಳಾಗಲಿ, ರಾಸಾಯನಿಕ ಪದಾರ್ಥಗಳಾಗಲಿ ಪತ್ತೆ ಆಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ವೈಟ್‌ಫೀಲ್ಡ್‌ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಇ–ಮೇಲ್‌ನಲ್ಲಿ ಏನಿತ್ತು?: ‘ನೀವು ಯಾರೂ ಬದುಕಲು ಅರ್ಹರಲ್ಲ. ಈ ಕಟ್ಟಡದ ಒಳಗೆ ಬಾಂಬ್ ಇದೆ. ಈ ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತದೆ. ನಾನು ಮಾನವೀಯತೆಯನ್ನು ದ್ವೇಷಿಸುವೆ, ನೀವು ಯಾರೂ ಬದುಕಲು ಅರ್ಹರಲ್ಲ’ ಎಂಬುದಾಗಿ ಇ–ಮೇಲ್‌ನಲ್ಲಿ ಬರೆಯಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT