ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲು ಜಾತಿ ಪತ್ರ: ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್

Published 11 ಮೇ 2023, 19:36 IST
Last Updated 11 ಮೇ 2023, 19:36 IST
ಅಕ್ಷರ ಗಾತ್ರ

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದ ಪ್ರಕರಣದಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಸೇರಿದಂತೆ ನಾಲ್ವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿಯ ಇನ್‌ಸ್ಪೆಕ್ಟರ್ ಎ.ವಿ. ವೆಂಕಟೇಶ್ ಮೂರ್ತಿ ಅವರು ದೂರು ನೀಡಿದ್ದಾರೆ.

ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದ ಡಿ.ಎಂ. ವಾಗೀಶ್, ಪತ್ರ ಪಡೆಯಲು ಸಹಕರಿಸಿದ್ದ ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್, ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅವರಿಗೆ ನೋಟಿಸ್ ನೀಡಿ, ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ದಾವಣಗೆರೆ ನಿವಾಸಿ ವಾಗೀಶ್, ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಿರುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿದ್ದರು. ಲಿಂಗಾಯತ ಜಾತಿಗೆ ಸೇರಿದ್ದ ವಾಗೀಶ್, ‘ಬೇಡ ಜಂಗಮ’ ಜಾತಿ ಹೆಸರಿನಲ್ಲಿ 2021ರ ಜುಲೈ 6ರಂದು ಪರಿಶಿಷ್ಟ ಜಾತಿ (ಎಸ್‌.ಸಿ) ಪ್ರಮಾಣ ಪತ್ರ ಪಡೆದಿದ್ದರು. ಇವರದ್ದು ಸುಳ್ಳು ಜಾತಿ ಪ್ರಮಾಣ ಪತ್ರವೆಂಬುದು ಗೊತ್ತಾಗುತ್ತಿದ್ದಂತೆ ಜಾತಿ ಪರಿಶೀಲನೆ ಸಮಿತಿ ಹಾಗೂ ಜಿಲ್ಲಾಧಿಕಾರಿ ತನಿಖೆ ನಡೆಸಿತ್ತು.’

‘ವಾಗೀಶ್ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿದ್ದು ಗೊತ್ತಾಗುತ್ತಿದ್ದಂತೆ, ಅದನ್ನು ರದ್ದುಪಡಿಸಲಾಗಿದೆ. ಜೊತೆಗೆ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಇನ್‌ಸ್ಪೆಕ್ಟರ್ ದೂರು ನೀಡಿದ್ದಾರೆ. ವಾಗೀಶ್ ಯಾವ ರೀತಿ ಪ್ರಮಾಣ ಪತ್ರ ಪಡೆದಿದ್ದಾರೆ ಎನ್ನುವ ಕುರಿತು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT