ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ನಕಲಿ ಡಿಟರ್ಜೆಂಟ್ ಪೌಡರ್ ಮಾರಾಟ: ಮಾಲೀಕ ವಶಕ್ಕೆ

Published 10 ಮಾರ್ಚ್ 2024, 16:26 IST
Last Updated 10 ಮಾರ್ಚ್ 2024, 16:26 IST
ಅಕ್ಷರ ಗಾತ್ರ

ಬೆಂಗಳೂರು: ನಕಲಿ ಡಿಟರ್ಜೆಂಟ್ ಪೌಡರ್ ತಯಾರಿಸಿ ಪ್ರತಿಷ್ಠಿತ ಕಂಪನಿಗಳ ಪೊಟ್ಟಣಗಳಲ್ಲಿ ತುಂಬಿ ಮಾರುತ್ತಿದ್ದ ಮಳಿಗೆ ಮೇಲೆ ಮಲ್ಲೇಶ್ವರ ಠಾಣೆ ಪೊಲೀಸರು ದಾಳಿ ಮಾಡಿದ್ದು, ಮಳಿಗೆ ಮಾಲೀಕ ಅರ್ಜುನ್ ಜೈನ್ ಅವರನ್ನು ವಶಕ್ಕೆ ಪಡೆದಿದ್ದಾರೆ.

‘ಮಲ್ಲೇಶ್ವರ ಹಾಗೂ ಸುತ್ತಮುತ್ತ ಪ್ರದೇಶಗಳ ಅಂಗಡಿಗಳಲ್ಲಿ ನಕಲಿ ಡಿಟರ್ಜೆಂಟ್ ಪೌಡರ್ ಮಾರಲಾಗುತ್ತಿತ್ತು. ಇದನ್ನು ಪತ್ತೆ ಮಾಡಿದ್ದ ಕಂಪನಿ ಪ್ರತಿನಿಧಿ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡು, ನಕಲಿ ಡಿಟರ್ಜೆಂಟ್ ತಯಾರಿಕೆ ಮಳಿಗೆ ಮೇಲೆ ಇತ್ತೀಚೆಗೆ ದಾಳಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘₹ 20 ಲಕ್ಷ ಮೌಲ್ಯದ ಡಿಟರ್ಜೆಂಟ್ ವಸ್ತುಗಳು, ವಿವಿಧ ಕಂಪನಿಯ ಪೊಟ್ಟಣಗಳು ಹಾಗೂ ಪೌಡರ್ ಮಿಶ್ರಣ ಯಂತ್ರವನ್ನು ಜಪ್ತಿ ಮಾಡಲಾಗಿದೆ. ಆರೋಪಿ ಅರ್ಜುನ್ ಹಲವು ತಿಂಗಳಿನಿಂದ ನಕಲಿ ಡಿಟರ್ಜೆಂಟ್ ಮಾರುತ್ತಿದ್ದನೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT