ಬುಧವಾರ, ಡಿಸೆಂಬರ್ 2, 2020
16 °C

ಡಿಸಿಪಿ ಹೆಸರಿನಲ್ಲಿ ನಕಲಿ ಖಾತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೂರ್ವ ವಿಭಾಗದ ಡಿಸಿಪಿ ಡಾ. ಎಸ್.ಡಿ. ಶರಣಪ್ಪ ಅವರ ಹೆಸರಿನಲ್ಲಿ ಫೇಸ್‌ಬುಕ್ ಜಾಲತಾಣದಲ್ಲಿ ನಕಲಿ ಖಾತೆ ತೆರೆಯಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶರಣಪ್ಪ, ‘ಇದು ನನ್ನ ಅಧಿಕೃತ ಖಾತೆ ಅಲ್ಲ. ಯಾರೋ ಕಿಡಿಗೇಡಿಗಳು ಈ ನಕಲಿ ಖಾತೆ ಸೃಷ್ಟಿಸಿದ್ದಾರೆ. ಈ ನಕಲಿ ಖಾತೆಯಿಂದ ಬರುವ ಸಂದೇಶ ಹಾಗೂ ಫ್ರೆಂಡ್ ರಿಕ್ವೆಸ್ಟ್‌ ನಂಬಬೇಡಿ’ ಎಂದಿದ್ದಾರೆ.

ಪೊಲೀಸ್ ಸಮವಸ್ತ್ರದಲ್ಲಿರುವ ಶರಣಪ್ಪ ಅವರ ಫೋಟೊವನ್ನೇ ಈ ಖಾತೆಗೆ ಅಪ್‌ಲೋಡ್ ಮಾಡಲಾಗಿದೆ. ಅವರಿಗೆ ಸಂಬಂಧಪಟ್ಟ ಹಲವು ಫೋಟೊಗಳೂ ಈ ಖಾತೆಯಲ್ಲಿವೆ. ಈ ಬಗ್ಗೆ ಸೈಬರ್‌ ಕ್ರೈಂ ಠಾಣೆ ಪೊಲೀಸರಿಗೂ ಡಿಸಿಪಿ ಮಾಹಿತಿ ನೀಡಿದ್ದಾರೆ.

ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ಪೊಲೀಸರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಈ ಸಂಬಂಧ ಸಿಐಡಿ ಪೊಲೀಸರು, ಐವರನ್ನು ಕಳೆದ ವಾರವಷ್ಟೇ ಬಂಧಿಸಿದ್ದಾರೆ. ಇದಾದ ನಂತರವೂ ಕೃತ್ಯಗಳು ನಡೆಯುತ್ತಿದ್ದು, ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು