ಬೆಂಗಳೂರು: ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ನೀಡಿದ ದೂರು ಆಧರಿಸಿ ಭಾರತೀಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(ಸಿ) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸೈಬರ್ ಪೊಲೀಸರು ಹೇಳಿದರು.

‘ರಾಜ್ಯಪಾಲರ ಹೆಸರಿನಲ್ಲಿ ತೆರೆದ ಫೇಸ್ಬುಕ್ ಖಾತೆಯಿಂದ ಕಿಡಿಗೇಡಿಯೊಬ್ಬ ಸಾರ್ವಜನಿಕರಿಗೆ ಸಂದೇಶ ಕಳುಹಿಸುತ್ತಿರುವುದು ಗೊತ್ತಾಗಿದೆ. ನಕಲಿ ಖಾತೆ ತೆರೆದಿರುವ ಆರೋಪಿಯನ್ನು ಪತ್ತೆಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.