ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ ಯತ್ನ ನಡೆದಿದೆ.

‘ಸೈಬರ್ ಕಳ್ಳರು ಬಿ.ದಯಾನಂದ್ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅವರ ಆಪ್ತರು, ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಸ್ನೇಹಿತರಾಗಲು ಕೋರಿಕೆ ಕಳುಹಿಸಿದ್ದಾರೆ. ಹಿಂದಿ ಭಾಷೆಯಲ್ಲಿ ಖಾತೆ ತೆರೆಯಲಾಗಿದ್ದು, ಕೋರಿಕೆಯನ್ನು ಸ್ವೀಕರಿಸಬಾರದು. ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಥವಾ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಚಾರ ಸೈಬರ್ ಅಪರಾಧ ವಿಭಾಗದ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ನಕಲಿ ಖಾತೆಯನ್ನು ನಿಷ್ಕ್ರಿಯ ಮಾಡಿ, ಆರೋಪಿ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.