ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಹೆಸರಿನಲ್ಲಿ ನಕಲಿ ಖಾತೆ; ದೂರು

Last Updated 18 ಸೆಪ್ಟೆಂಬರ್ 2018, 18:51 IST
ಅಕ್ಷರ ಗಾತ್ರ

ಬೆಂಗಳೂರು:‌ ‘ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ‘ಕಾಂಗ್ರೆಸ್ ಐಟಿ ಸೆಲ್‘ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವ ಅಪರಿಚಿತರು, ಪಕ್ಷದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ‌ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದರಾಜ್, ನಗರದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

‘ಕಾಂಗ್ರೆಸ್‌ ಪಕ್ಷದ ಅವಹೇಳನಕಾರಿ ಪೋಸ್ಟ್‌ಗಳನ್ನುನಕಲಿ ಖಾತೆಯಲ್ಲಿ ಪ್ರಕಟಿಸಲಾಗುತ್ತಿದೆ. ಅದರಿಂದ ಪಕ್ಷದ ಘನತೆಗೆ ಧಕ್ಕೆ ತರಲಾಗುತ್ತಿದೆ. ಖಾತೆ ಸೃಷ್ಟಿಸಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕು’ ಎಂದು ಮುಕುಂದರಾಜ್ ಒತ್ತಾಯಿಸಿದ್ದಾರೆ.

ಪೊಲೀಸರು, ‘ದೂರು ಸ್ವೀಕರಿಸಿ ಪರಿಶೀಲಿಸುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT