ಭಾನುವಾರ, ಏಪ್ರಿಲ್ 11, 2021
32 °C

ನಕಲಿ ಚಿನ್ನ ಮಾರುತ್ತಿದ್ದ ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಕಲಿ ಚಿನ್ನವನ್ನೇ ಅಸಲಿ ಚಿನ್ನವೆಂದು ಹೇಳಿ ನಂಬಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಸಂತೆಮಳಾದ ಅರ್ಜುನ್ (31) ಹಾಗೂ ರಾಹುಲ್ (21) ಬಂಧಿತರು. ಅವರ ಬಳಿ ಇದ್ದ 1,298 ಗ್ರಾಂ ನಕಲಿ ಚಿನ್ನವನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಎಸ್‌.ಜೆ.ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿರುವ ವಸತಿಗೃಹವೊಂದರ ಎದುರು ಫೆ. 5ರಂದು ಆರೋಪಿಗಳು ನಿಂತುಕೊಂಡಿದ್ದರು. ತಮ್ಮ ಬಳಿ ಇದ್ದ ಚಿನ್ನವನ್ನು ಅಭಿಷೇಕ್‌ ಎಂಬುವರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಗಳನ್ನು ಸೆರೆ ಹಿಡಿಯಲಾಯಿತು’ ಎಂದೂ ತಿಳಿಸಿದರು.

‘ತಮ್ಮ ಜಮೀನಿನಲ್ಲಿ ಅಪಾರ ಪ್ರಮಾಣದ ಚಿನ್ನ ಸಿಕ್ಕಿದ್ದು, ಅದನ್ನು ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ಆರೋಪಿಗಳು ಹೇಳಿದ್ದರು. ಅದನ್ನು ನಂಬಿದ್ದ ಕೆಲ ಸಾರ್ವಜನಿಕರು, ಆರೋಪಿಗಳ ಜೊತೆ ಮಾತುಕತೆ ನಡೆಸಿ ಚಿನ್ನ ಖರೀದಿಸಲು ಮುಂದಾಗಿದ್ದರು. ಗ್ರಾಹಕರಿಗೆ ಚಿನ್ನ ಕೊಡಲು ಬಂದಾಗ ಆರೋಪಿಗಳು ಸಿಕ್ಕಿಬಿದ್ದರು’ ಎಂದೂ ಪೊಲೀಸರು ಹೇಳಿದರು.

‘ಜಪ್ತಿ ಮಾಡಿದ ಚಿನ್ನ ಪರಿಶೀಲಿಸಿದಾಗ ನಕಲಿ ಎಂಬುದು ತಿಳಿಯಿತು. ಅಕ್ರಮವಾಗಿ ಹಣ ಸಂಪಾದಿಸುವ ಉದ್ದೇಶದಿಂದ ನಕಲಿ ಚಿನ್ನ ಮಾರಾಟ ಮಾಡಲು ಬಂದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದೂ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.