ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಪ್ಪು ಮಾಹಿತಿ ವಿಡಿಯೊ ಹರಿಬಿಟ್ಟವನಿಗೆ ಪೊಲೀಸರ ಎಚ್ಚರಿಕೆ

Last Updated 28 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ತಪ್ಪು ಮಾಹಿತಿಯುಳ್ಳ ವಿಡಿಯೊವನ್ನು ಟ್ವಟರ್‌ನಲ್ಲಿ ಹರಿಬಿಟ್ಟಿದ್ದ ವ್ಯಕ್ತಿಯೊಬ್ಬನಿಗೆ ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಎಚ್ಚರಿಕೆ ಬಳಿಕ ವಿಡಿಯೊವನ್ನು ಟ್ವಿಟರ್‌ ಖಾತೆಯಿಂದ ಅಳಿಸಿ ಹಾಕಲಾಗಿದೆ.

‘ಟ್ವಿಟರ್‌ನಲ್ಲಿರುವ ತಮ್ಮ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್‌ ಮಾಡಿದ್ದ ಕನ್ನಿಮುಜಿ ಎಂಬುವರು, ಅದೇ ವಿಡಿಯೊವನ್ನು ಬೆಂಗಳೂರು ಸಿಟಿ ಪೊಲೀಸ್ ಖಾತೆಗೆ ಟ್ಯಾಗ್‌ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.

‘ವಿಡಿಯೊ ನೋಡಿ ಹಲವರು ಪ್ರತಿಕ್ರಿಯಿಸಿದ್ದರು. ವಿಡಿಯೊವನ್ನು ಪರಿಶೀಲಿಸಿದ್ದ ಪೊಲೀಸರು, ‘ಇದು ಹಳೇ ವಿಡಿಯೊ. ತಪ್ಪು ಮಾಹಿತಿ ಹರಡುವುದನ್ನು ನಿಲ್ಲಿಸಿ. ಇಲ್ಲದಿದ್ದರೆ ನಿಮ್ಮ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT