ಶುಕ್ರವಾರ, ಫೆಬ್ರವರಿ 26, 2021
20 °C

ವಿದೇಶದಲ್ಲಿ ಕೆಲಸದ ಆಮಿಷ; ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಷ್ಯಾ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಆರೋಪದಡಿ ಪ್ರದೀಪ್ (45) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಕೇರಳದ ಪ್ರದೀಪ್, ರಾಜಾಜಿನಗರದಲ್ಲಿ ‘ಸಿ ವರ್ಲ್ಡ್’ ಎಂಬ ಕಂಪನಿ ತೆರೆದಿದ್ದ. ಅದರ ಹೆಸರಿನಲ್ಲಿ ಜಾಹೀರಾತುಗಳನ್ನು ನೀಡಿ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸಿ ವಂಚಿಸುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಆರೋಪಿಯು ನೀಡಿದ್ದ ಜಾಹೀರಾತು ಗಮನಿಸಿ ಅನುಮಾನಗೊಂಡಿದ್ದ ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದ ತಂಡ, ರಾಜಾಜಿನಗರದ ಕಚೇರಿ ಮೇಲೆ ದಾಳಿ ಮಾಡಿತ್ತು. ಆ ಕಂಪನಿಯು ನಕಲಿ ಎಂಬುದು ಗೊತ್ತಾಗಿತ್ತು. ಕೆಲ ಉದ್ಯೋಗಾಕಾಂಕ್ಷಿಗಳಿಂದ ತಲಾ ಎರಡದಿಂದ ಮೂರು ಲಕ್ಷ ಪಡೆದಿರುವ ಮಾಹಿತಿ ಇದೆ. ಆರೋಪಿ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ತಿಳಿಸಿದರು.

‘ಕಂಪನಿಗಳ ಬಗ್ಗೆ ಎಚ್ಚರ’: ‘ಉದ್ಯೋಗದ ಆಮಿಷವೊಡ್ಡುವ ಕಂಪನಿಗಳು, ಹಣ ಪಡೆದು ವಂಚಿಸುತ್ತಿವೆ. ಅಂಥ ಕಂಪನಿಗಳ ಬಗ್ಗೆ ಎಚ್ಚರ ವಹಿಸಿ’ ಎಂದು ಸಿಸಿಬಿಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸಂದೀಪ ಪಾಟೀಲ ಹೇಳಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು