ಬೆಂಗಳೂರು: ವೈವಾಹಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ನಗರದ ಯುವತಿಯೊಬ್ಬರಿಂದ ₹ 1.45 ಲಕ್ಷ ಪಡೆದು ವಂಚಿಸಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಸ್ಥಳೀಯ ನಿವಾಸಿಯಾದ ಯುವತಿ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಲಿಯಾನೊ ಜಯೇಶ್ ಕೊಟಿರಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
‘ವರನನ್ನು ಹುಡುಕುತ್ತಿದ್ದ ಯುವತಿ, ವೈವಾಹಿಕ ಜಾಲತಾಣವೊಂದರಲ್ಲಿ ಖಾತೆ ತೆರೆದಿದ್ದರು. ಅವರನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಮದುವೆಯಾಗುವುದಾಗಿ ಹೇಳಿದ್ದ. ಇಬ್ಬರೂ ಪರಸ್ಪರ ಪರಿಚಯವಾಗಿ ಮಾತುಕತೆ ಆರಂಭಿಸಿದ್ದರು. ಉಡುಗೊರೆ ಕಳುಹಿಸುವುದಾಗಿ ಆರೋಪಿ ಹೇಳಿದ್ದ.’
‘ವಿಮಾನ ನಿಲ್ದಾಣದ ಅಧಿಕಾರಿಗಳ ಸೋಗಿನಲ್ಲಿ ಯುವತಿಗೆ ಕರೆ ಮಾಡಿದ್ದ ಆರೋಪಿ, ‘ಬೆಲೆಬಾಳುವ ಆಭರಣ ಇರುವ ಉಡುಗೊರೆ ಬಂದಿದೆ. ಅದನ್ನು ಬಿಡಿಸಿಕೊಳ್ಳಲು ಶುಲ್ಕ ಪಾವತಿ ಮಾಡಬೇಕು’ ಎಂದಿದ್ದ. ಅದನ್ನು ನಂಬಿದ್ದ ಯುವತಿ, ಆರೋಪಿ ಹೇಳಿದ್ದ ಖಾತೆಗಳಿಗೆ ಹಂತ ಹಂತವಾಗಿ ₹ 1.45 ಲಕ್ಷ ಜಮೆ ಮಾಡಿದ್ದರು. ಅದಾದ ನಂತರ ಯಾವುದೇ ಉಡುಗೊರೆ ಬಂದಿಲ್ಲ. ಆರೋಪಿಯೂ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಆತ ನಕಲಿ ಖಾತೆ ತೆರೆದು ಯುವತಿಯನ್ನು ವಂಚಿಸಿರುವ ಸಾಧ್ಯತೆ ಇದೆ’ ಎಂದೂ ಪೊಲಿಸರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.