ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ₹2,000 ಮುಖಬೆಲೆಯ ಖೋಟಾ ನೋಟುಗಳು ಪತ್ತೆ

Published 16 ಡಿಸೆಂಬರ್ 2023, 15:52 IST
Last Updated 16 ಡಿಸೆಂಬರ್ 2023, 15:52 IST
ಅಕ್ಷರ ಗಾತ್ರ

ಬೆಂಗಳೂರು: ನೃಪತುಂಗ ರಸ್ತೆಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ಶಾಖೆಗೆ ತುಂಬಲು ತರಲಾಗಿದ್ದ ನೋಟುಗಳಲ್ಲಿ ₹ 2,000 ಮುಖಬೆಲೆಯ 6 ಖೋಟಾ ನೋಟುಗಳು ಪತ್ತೆಯಾಗಿದ್ದು, ಈ ಬಗ್ಗೆ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಆರ್‌ಬಿಐ ಸಹಾಯಕ ಪ್ರಧಾನ ವ್ಯವಸ್ಥಾಪಕರು ದೂರು ನೀಡಿದ್ದಾರೆ. ವಿಜಯಾ ಬ್ಯಾಂಕ್ ಎಂ.ಜಿ.ರಸ್ತೆ ಶಾಖೆಯ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವಿಜಯಾ ಬ್ಯಾಂಕ್ ಎಂ.ಜಿ. ರಸ್ತೆ ಶಾಖೆಯ ಕರೆನ್ಸಿ ಚೆಸ್ಟ್‌ನಿಂದ ಅ. 25ರಂದು ಆರ್‌ಬಿಐಗೆ ಹಣ ಬಂದಿತ್ತು. ಪರಿಶೀಲನೆ ನಡೆಸಿದಾಗ ಅದರಲ್ಲಿ ₹ 2,000 ಮುಖಬೆಲೆಯ 6 ಖೋಟಾ ನೋಟುಗಳು ಇದ್ದವು. ನಂತರ, ಆರ್‌ಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ನಂತರ, ವರದಿ ಸಮೇತ ಠಾಣೆಗೆ ದೂರು ನೀಡಿದ್ದಾರೆ’ ಎಂದು ತಿಳಿಸಿವೆ.

‘ಅಪರಿಚಿತರು ಖೋಟಾ ನೋಟುಗಳನ್ನು ವಿಜಯಾ ಬ್ಯಾಂಕ್‌ನ ಶಾಖೆಗೆ ನೀಡಿರುವ ಅನುಮಾನವಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT