ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡಿಜಿಪಿ ಹೆಸರಿನಲ್ಲಿ ನಕಲಿ ಆದೇಶ: ಎಫ್‌ಐಆರ್ ದಾಖಲು

Published 22 ಮಾರ್ಚ್ 2024, 15:39 IST
Last Updated 22 ಮಾರ್ಚ್ 2024, 15:39 IST
ಅಕ್ಷರ ಗಾತ್ರ

ಬೆಂಗಳೂರು: ‘ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿಗಾಗಿ ಮಾರ್ಚ್ 25, 26 ಹಾಗೂ 27ರಂದು ದೈಹಿಕ ಸಾಮರ್ಥ್ಯ ಪರೀಕ್ಷೆ ನಿಗದಿಪಡಿಸಲಾಗಿದೆ’ ಎಂಬುದಾಗಿ ನೇಮಕಾತಿ ವಿಭಾಗದ ಎಡಿಜಿಪಿ ಹೆಸರಿನಲ್ಲಿ ನಕಲಿ ಆದೇಶ ಸೃಷ್ಟಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ನಕಲಿ ಆದೇಶ ಗಮನಿಸಿದ್ದ ನೇಮಕಾತಿ ವಿಭಾಗದ ಅಧಿಕಾರಿಗಳು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘3064 ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿಗಾಗಿ ಮಾರ್ಚ್ 18, 19 ಹಾಗೂ 20ರಂದು ದೈಹಿಕ ಪರೀಕ್ಷೆ ನಿಗದಿಪಡಿಸಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ನೇಮಕಾತಿ ವಿಭಾಗದಿಂದ ರಾಜ್ಯದ ಎಲ್ಲ ಪೊಲೀಸ್ ಘಟಕಗಳಿಗೆ ಈ ಬಗ್ಗೆ ಮಾಹಿತಿ ರವಾನಿಸಲಾಗಿದೆ. ಇದರ ಬೆನ್ನಲ್ಲೇ ಕಿಡಿಗೇಡಿಗಳು, ಅಭ್ಯರ್ಥಿಗಳ ದಾರಿ ತಪ್ಪಿಸುವ ಉದ್ದೇಶದಿಂದ ನಕಲಿ ಆದೇಶ ಸೃಷ್ಟಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

‘ಅಭ್ಯರ್ಥಿಗಳು ಯಾವುದೇ ತಪ್ಪು ಮಾಹಿತಿಗೆ ಕಿವಿಗೊಡಬಾರದು. ನೇಮಕಾತಿಗೆ ಸಂಬಂಧಪಟ್ಟಂತೆ ಯಾವುದೇ ಖಚಿತ ಮಾಹಿತಿ ಬೇಕಾದರೆ, https://ksp-recruitment.in/ ಹಾಗೂ ಸಹಾಯವಾಣಿ ಸಂಖ್ಯೆ: 080–22943346, 080–22943039 ಸಂಪರ್ಕಿಸಬಹುದು’ ಎಂದು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT